ಶನಿವಾರ, ಮೇ 21, 2022
25 °C

ಭ್ರಷ್ಟಾಚಾರ ಸಹಿಸುವುದಿಲ್ಲ-ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರ ಕಾನೂನು ಹೋರಾಟ ನಡೆಸುವುದಾಗಿ ಬಿಜೆಪಿ ಹೇಳಿದೆ. ಆದರೆ, ಪಕ್ಷ ಭ್ರಷ್ಟಾಚಾರವನ್ನು ಎಂದೂ ಸಹಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.ಯಡಿಯೂರಪ್ಪ ಬಂಧನ ಕುರಿತು ತೀವ್ರ ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಆ ಪಕ್ಷವೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವಾಗ ಮತ್ತೊಬ್ಬರ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದಿದೆ.ಯಡಿಯೂರಪ್ಪ ಪರ ಬಿಜೆಪಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದೆ. ಆದರೆ, ಭ್ರಷ್ಟಾಚಾರವನ್ನು ಸಹಿಸಿಕೊಳ್ಳದಿರಲು ತೀರ್ಮಾನಿಸಿದೆ ಎಂದು ಪಕ್ಷದ ವಕ್ತಾರ ಜೆ.ಪಿ. ನದ್ದ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.