ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ

ಭಾನುವಾರ, ಜೂಲೈ 21, 2019
26 °C

ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ

Published:
Updated:

ಕೊಪ್ಪಳ: ತಾಲ್ಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ `ಕಾಂಗ್ರೆಸ್ ನಡಿಗೆ- ಜನರ ಬಳಿಗೆ~ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ,ಬಸವರಾಜ ಹಿಟ್ನಾಳ್, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ಬಿ.ಜೆ.ಪಿ. ಸರ್ಕಾರವನ್ನು ತೊಲಗಿಸಿ, ಸ್ವಾಭಿಮಾನಿ ಕರ್ನಾಟಕ ನಿರ್ಮಾಣ ಮಾಡಲು ಪಣ ತೊಡುವಂತೆ ಕರೆ ನೀಡಿದರು.ಸಾಮಾಜಿಕ ನ್ಯಾಯ, ಪ್ರಗತಿ, ಸ್ಥಿರತೆಯಲ್ಲಿ ಪಕ್ಷಕ್ಕೆ ನಂಬಿಕೆ ಇದೆ. ಎಲ್ಲಾ ಸಮುದಾಯಗಳ ಹಿತಾಸಕ್ತಿ ಕಾಪಾಡುವ ಜೊತೆಗೆ ಶೋಷಿತ ವರ್ಗಗಳನ್ನು ರಾಷ್ಟ್ರಿಯ ಮುಖ್ಯವಾಹಿನಿಗೆ ತರಲು ಪಕ್ಷವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ವೀಕ್ಷಕ ಮುಕುಂದರಾವ್ ಭವಾನಿಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಬಿ.ನಾಗರಹಳ್ಳಿ, ಮರ್ದಾನಲಿ ಅಡ್ಡೇವಾಲೆ, ಜುಲ್ಲು ಖಾದರ ಖಾದ್ರಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಮರೇಶ ಉಪಲಾಪೂರ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ರಾಘವೇಂದ್ರ ಹಿಟ್ನಾಳ್, ಮಾಜಿ ಅಧ್ಯಕ್ಷ ಎಚ್.ಎಲ್.ಹಿರೇಗೌಡ್ರ ಮತ್ತಿತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry