ಮಂಗಳವಾರ, ಜೂನ್ 15, 2021
24 °C

ಭ್ರೂಣಹತ್ಯೆ ಶಿಕ್ಷಾರ್ಹ ಅಪರಾಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಡಿಬಂಡೆ: ವೈದ್ಯಕೀಯ ಕ್ಷೇತ್ರದ ಆಧುನಿಕ ತಂತ್ರಜ್ಞಾನ ಇತ್ತೀಚಿನ ದಿನಗಳಲ್ಲಿ ದುರ್ಬಳಕೆಯಾಗುತ್ತಿದ್ದು, ಭ್ರೂಣಹತ್ಯೆಗೆ ಕಾರಣವಾಗುತ್ತಿದೆ. ಹೆರಿಗೆ ಮುನ್ನ ಲಿಂಗವನ್ನು ಪತ್ತೆ ಮಾಡಿ, ಭ್ರೂಣಹತ್ಯೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಭಕ್ತವತ್ಸಲಂ ತಿಳಿಸಿದರು.ವಿಶ್ವ ಮಹಿಳೆಯರ ದಿನಾಚರಣೆ ಅಂಗವಾಗಿ ಗುಡಿಬಂಡೆ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ~ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ. ಹೆಣ್ಣು ಎಂದು ಪತ್ತೆಯಾದ ಕೂಡಲೇ ಭ್ರೂಣ ಹತ್ಯೆ ಮಾಡಲಾಗುತ್ತಿದ್ದು, ಇದರಿಂದ ಹೆಣ್ಣುಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ~ ಎಂದರು.ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಿ.ಎಸ್.ಉಮಾರಾಣಿ ಮಾತನಾಡಿ, ~ಗ್ರಾಮೀಣ ಪ್ರದೇಶದ ಬಹುತೇಕ ಮಹಿಳೆಯರು ರಕ್ತಹೀನತೆ ಮತ್ತು ನಿಶ್ಯಕ್ತಿಯಿಂದ ಬಳಲುತ್ತಿದ್ದಾರೆ. ಪೌಷ್ಟಿಕ ಆಹಾರ ಸಿಗದ ಕಾರಣ ಮಕ್ಕಳು ಸಹ ನಿಶ್ಯಕ್ತಿಯಿಂದ ಬಳಲುತ್ತಿದ್ದಾರೆ. ಉತ್ತಮ ಗುಣಮಟ್ಟದ ಆಹಾರ ಸೇವಿಸಬೇಕು~ ಎಂದರು.ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ. ಮೋಹನ್‌ಬಾಬು, ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಬೀನ್‌ತಾಜ್ ಚಾಂದ್, ಮುಖ್ಯಾಧಿಕಾರಿ ಶ್ರೀರಾಮರೆಡ್ಡಿ, ಸದಸ್ಯರಾದ ಚೆನ್ನಮ್ಮ, ರಾಮಸ್ವಾಮಿ, ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.