ಸೋಮವಾರ, ಜೂನ್ 21, 2021
23 °C

ಭ್ರೂಣ ಲಿಂಗ ಪತ್ತೆ ಕೇಂದ್ರಗಳ ಮಾಹಿತಿ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಪೋಕ್ಲು: ಭ್ರೂಣ ಲಿಂಗ ಪತ್ತೆ ತಡೆಯಲು ಕಾನೂನು ಜಾರಿಯಲ್ಲಿದ್ದರೂ ಜನರ ಸಹಕಾರ ದೊರಕುತ್ತಿಲ್ಲ. ಭ್ರೂಣ ಲಿಂಗ ಪತ್ತೆ ಮಾಡುವ ಕೇಂದ್ರಗಳ ಮಾಹಿತಿಯನ್ನು ಜನರು ಇಲಾಖೆಯ ಗಮನಕ್ಕೆ ತರಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಣ್ಣಗೌಡ ತಿಳಿಸಿದರು.ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಶಾಸನದ ಕುರಿತು ಆರೋಗ್ಯ ಸೇವಾ ವೃತ್ತಿ ಪರರಿಗೆ ಆಯೋಜಿಸಲಾಗಿದ್ದ ಕಾರ್ಯಗಾರದಲ್ಲಿ ಮಾತನಾಡಿದರು.ಸ್ಕ್ಯಾನಿಂಗ್ ಸೆಂಟರ್‌ಗಳ ಬಗ್ಗೆ ಯಾರು ಕೂಡ ದೂರು ನೀಡುತ್ತಿಲ್ಲ. ಇದರಿಂದ ಲಿಂಗ ಪತ್ತೆ ತಡೆಗಟ್ಟಲು ಅಸಾಧ್ಯವಾಗಿದೆ. ಸರ್ಕಾರ ಇದರ ಬಗ್ಗೆ ಜನಜಾಗೃತಿ ಮೂಡಿಸಲು ಇಂತಹ ಕಾರ್ಯಗಾರ ಆಯೋಜಿಸುತ್ತಿದೆ. ಸಮಾಜದಲ್ಲಿ ಹೆಣ್ಣು ಮಗು ಬೇಡ ಎಂಬ ಕೀಳು ಭಾವನೆ ದೂರವಾಗಿ ಹೆಣ್ಣು-ಗಂಡು ಒಂದೇ ಎಂಬ ಮನೋಭಾವನೆ ಬೆಳೆಯಬೇಕು ಎಂದರು.ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಪುಟ್ಟಪ್ಪ ಮಾತನಾಡಿ, ಗಂಡು ಹೆಣ್ಣಿನ ಅನುಪಾತ ಸರಿ ಸಮಾನವಾಗಬೇಕು. ಆಧುನಿಕ  ತಂತ್ರಜ್ಞಾನಗಳಿಂದ ಸಮತೋಲನ ಕಳೆದುಕೊಳ್ಳುತ್ತಿದೆ. ಮೂಢನಂಬಿಕೆಗಳಿಂದ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಸಲ್ಲ. ಹೆಣ್ಣು ಮಕ್ಕಳ ಅನುಪಾತ ಹೆಚ್ಚಿಸುವಲ್ಲಿ ಜನರು ಸ್ವಯಂಪ್ರೇರಣೆಯಿಂದ ಮುಂದೆ ಬರಬೇಕು ಎಂದರು.ಸಮಾರಂಭವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಕೇಶವ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಪಂದಿಯಂಡ ರಮೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಲುವಾದಿ ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಲುವಾದಿ ಸ್ವಾಗತಿಸಿ, ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.