ಬುಧವಾರ, ಮೇ 12, 2021
18 °C

ಮಂಗಲ ಗೋಶಾಲೆ: ಸಚಿವರ ಅತೃಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ತಾಲ್ಲೂಕಿನ ಮಂಗಲದಲ್ಲಿ ಗೋಶಾಲೆ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಹನೂರು ಭಾಗದ ಬರಪೀಡಿತ ಪ್ರದೇಶಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.ಮಂಗಲದ ಗೋಶಾಲೆಗೆ ಭೇಟಿ ನೀಡಿದ ಸಚಿವರು, ಜಾನುವಾರುಗಳಿಗೆ ಮೇವು ಪೂರೈಕೆ ಮಾಡುವಲ್ಲಿ ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.ಮರಗಳಿಗೆ ಜಾನುವಾರು ಕಟ್ಟಿಹಾಕಿ ಮೇವು ಪೂರೈಸಲಾಗುತ್ತಿದೆ. ಇದು ಗೋಶಾಲೆಯಾಗುವುದಿಲ್ಲ. ರಾಸುಗಳಿಗೆ ನೆರಳಿನ ವ್ಯವಸ್ಥೆಯೂ ಇಲ್ಲ. ಮೇವಿನ ರಾಶಿ ಹಾಕಿರುವುದು ಸರಿಯಲ್ಲ. ಕೂಡಲೇ, ಸಮರ್ಪಕ ವ್ಯವಸ್ಥೆ ಕೈಗೊಳ್ಳಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಹನೂರು ಪಟ್ಟಣದಲ್ಲಿ ಮೇವಿನ ಬ್ಯಾಂಕ್ ತೆರೆಯ ಲಾಗಿದೆ. ಯಾವುದೇ, ತೊಂದರೆಯಾಗದಂತೆ ಜಾನುವಾರು ಗಳಿಗೆ ಮೇವು, ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ಸಂಸದರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಬರಪರಿಹಾರ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದರು.ಬಳಿಕ ಕೊಳ್ಳೇಗಾಲ ತಾಲ್ಲೂಕಿನ ಮಣಗಳ್ಳಿ ಮತ್ತು ಚಿಂಚಳ್ಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕುಡಿಯುವ ನೀರು ಪೂರೈಕೆ ಸಂಬಂಧ ಸಮರ್ಪಕವಾದ ವರದಿ ಸಿದ್ಧಪಡಿಸಿ ಸಲ್ಲಿಸಲು ಪಂಚಾಯತ್‌ರಾಜ್ ಎಂಜಿನಿ ಯರಿಂಗ್ ಅಧಿಕಾರಿಗಳು ಕ್ರಮವಹಿಸಬೇಕು. ವರದಿ ಸಲ್ಲಿಸಿದರೆ ಮುಖ್ಯಮಂತ್ರಿ ಬಳಿಯಲ್ಲಿ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದರು.ಶಾಸಕ ಆರ್. ನರೇಂದ್ರ, ಜಿ.ಪಂ. ಸದಸ್ಯರಾದ ದೇವ ರಾಜು, ನಾಗೇಂದ್ರಮೂರ್ತಿ, ಜಿಲ್ಲಾಧಿಕಾರಿ ಕೆ.ಆರ್. ಸುಂದರ್, ಉಪ ವಿಭಾಗಾಧಿಕಾರಿ ಎ.ಬಿ. ಬಸವ ರಾಜು, ಜಿ.ಪಂ. ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಪಿ. ಶಂಕರರಾಜ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.   

ನೋಟಿಸ್ ಜಾರಿಗೆ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಮೇವಿನ ಬೀಜದ ಕಿಟ್ ವಿತರಣೆ ಸಂಬಂಧ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಬಳಿ ಸಮರ್ಪಕ ಮಾಹಿತಿ ಇಲ್ಲ. ಎಲ್ಲೆಲ್ಲಿ ಮೇವು ಬೆಳೆಸಲಾಗಿದೆ ಎಂಬ ಮಾಹಿತಿಯನ್ನೂ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳಬೇಕು ಎಂದು ಸಚಿವ ರೇಣುಕಾಚಾರ್ಯ ಜಿಲ್ಲಾಧಿಕಾರಿಗೆ ಸೂಚಿಸಿದರು.ಮಂಗಲದಲ್ಲಿ ಸಮರ್ಪಕವಾಗಿ ಗೋಶಾಲೆ ತೆರೆಯುವಲ್ಲಿ ತಾಲ್ಲೂಕು ಆಡಳಿತ ವೈಫಲ್ಯ ಕಂಡಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ಗೂ ನೋಟಿಸ್ ನೀಡುವಂತೆ ಸೂಚಿಸಿದ ಅವರು, ಬರಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗು ವುದು ಎಂದು ಎಚ್ಚರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.