ಮಂಗಳೂರಿನ ಮಹಿಳಾ ತಂಡ ಚಾಂಪಿಯನ್

7

ಮಂಗಳೂರಿನ ಮಹಿಳಾ ತಂಡ ಚಾಂಪಿಯನ್

Published:
Updated:

ದಾವಣಗೆರೆ: ಮಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ತಂಡ ನಗರದಲ್ಲಿ ನಡೆದ 34ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಗಳಿಸಿತು.ನಗರದ ಡಿಆರ್‌ಆರ್ ಪಾಲಿಟೆಕ್ನಿಕ್ ಆಶ್ರಯದಲ್ಲಿ ಭಾನುವಾರ ಮುಕ್ತಾಯಗೊಂಡ ಈ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ತಂಡವು ಅತಿ ಹೆಚ್ಚು ಅಂಕಗಳ ಸಾಧನೆಯ ಮೂಲಕ ಪ್ರಶಸ್ತಿ ಮುಡಿಗೇರಿಸಿಕೊಂಡಿತು.ಪುರುಷರ ವಿಭಾಗದಲ್ಲಿ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜು ತಂಡ ಪ್ರಶಸ್ತಿ ಪಡೆಯಿತು. ವೈಯಕ್ತಿಕ ಚಾಂಪಿಯನ್: ಮಹಿಳಾ ವಿಭಾಗದಲ್ಲಿ ಮಣಿಪಾಲದ ಡಾ.ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ನ ಯಶಸ್ವಿನಿ, ಪುರುಷರ ವಿಭಾಗದಲ್ಲಿ ಆತಿಥೇಯ ದಾವಣಗೆರೆ ಡಿಆರ್‌ಆರ್ ಪಾಲಿಟೆಕ್ನಿಕ್‌ನ ಎಸ್. ಸಂದೀಪ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಗಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry