ಮಂಡ್ಯ: ನಗರದ ಸ್ವಚ್ಛತೆ, ನೈರ್ಮಲ್ಯ ಕೆಲಸಗಳು ಸರಿಯಾಗಿ ಆಗದಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಎಚ್ಚರಿಸಿದರು.

ನಗರದಲ್ಲಿ ಗುರುವಾರ ನಗರಸಭೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿದಿನ ನಾನು ನಗರ ಪ್ರದಕ್ಷಿಣೆ ಹಾಕುತ್ತಿದ್ದೇನೆ. ಆದರೆ ಸ್ವಚ್ಛತಾ ಕಾರ್ಯಗಳು ಅಷ್ಟೇನು ಸಮರ್ಪಕವಾಗಿ ನಡೆಯುತ್ತಿಲ್ಲ. ಆರೋಗ್ಯ ನಿರೀಕ್ಷಕರು ಈ ಬಗ್ಗೆ ಗಮನ ಹರಿಸಬೇಕು. ಪ್ರತಿದಿನ ಬೆಳಿಗ್ಗೆ 5.30ಕ್ಕೆ ಸ್ವಚ್ಛತೆ ಕಾರ್ಯ ಆರಂಭವಾಗಬೇಕು. ಐದಾರು ವಾರ್ಡಿಗೆ ಒಬ್ಬ ಅಧಿಕಾರಿಗೆ ಜವಾಬ್ದಾರಿ ಕೊಟ್ಟು, ಸಮರ್ಪಕವಾಗಿ ಉಸ್ತುವಾರಿ ವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

ನಗರಸಭೆಗೆ ನಾಲ್ಕೈದು ವರ್ಷಗಳಿಂದ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಆಗುತ್ತಿದೆ. ಇದರೊಂದಿಗೆ ಸ್ಥಳೀಯವಾಗಿ ಬರಬೇಕಾದ ತೆರಿಗೆ ಬಾಕಿ ಹಣದ ವಸೂಲಿ ಮಾಡಬೇಕು. ಒಳಚರಂಡಿ ವ್ಯವಸ್ಥೆ ಸಮಸ್ಯೆ ಎಲ್ಲ ಕಡೆ ಇದೆ. ಅವಶ್ಯಕತೆ ಇರುವ ಕಡೆ ಮಾತ್ರ ಕಾಂಕ್ರೀಟ್ ಹಾಕಿಸಬೇಕು. ಅಭಿವೃದ್ಧಿ ಕಾರ್ಯಗಳಿಗೆ ಜನಪ್ರತಿನಿಧಿಗಳ ಸಹಕಾರ ಪಡೆಯಬೇಕು ಎಂದರು.

ನಗರಸಭೆಗೆ ಎಸ್ಎಫ್ಸಿ ಅನುದಾನ, ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ನಿಧಿಯಿಂದ ಹಣ ಬರುತ್ತಿದೆ. ಇದರೊಂದಿಗೆ ಸ್ಥಳೀಯ ತೆರಿಗೆಯನ್ನು ಕ್ರಮಬದ್ಧವಾಗಿ ವಸೂಲಿ ಮಾಡಿದರೆ ಅಭಿವದ್ಧಿ ಕಾರ್ಯಕ್ರಮಗಳಿಗೆ ಸಾಕಷ್ಟು ಹಣ ದೊರೆಯುತ್ತದೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಎಂ.ಪಿ. ಅರುಣಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಪಿ. ಶ್ರೀಧರ್. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿ.ರಾಜು, ಆಯಕ್ತ ಪ್ರಕಾಶ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.