ಸೋಮವಾರ, ಜೂನ್ 21, 2021
21 °C

ಮಂಡ್ಯ: ಪುಟ್ಟರಾಜು ಜೆಡಿಎಸ್‌ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಮಂಡ್ಯ ಲೋಕಸಭೆ ಜೆಡಿಎಸ್‌ ಅಭ್ಯರ್ಥಿಯಾಗಿ ಮಾಜಿ ಶಾಸಕ ಸಿ.ಎಸ್‌. ಪುಟ್ಟರಾಜು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಶಾಸಕ ಎನ್‌. ಚಲುವರಾಯಸ್ವಾಮಿ ಘೋಷಿಸಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತ­ನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬೆಳವಣಿಗೆ­ಯಿಂದಾಗಿ ಎರಡನೇ ಪಟ್ಟಿ ಪ್ರಕಟವಾಗುವುದು ವಿಳಂಬ ಆಗಲಿದೆ. ಅನವಶ್ಯಕ ಗೊಂದಲ ಆಗಬಾರದು ಎಂಬ ಕಾರಣಕ್ಕೆ ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗಿದೆ ಎಂದರು. ಅತಿಯಾದ ಆತ್ಮವಿಶ್ವಾಸದಿಂದಾಗಿ ಮಂಡ್ಯ ಲೋಕಸಭೆಯ ಉಪಚುನಾವಣೆಯಲ್ಲಿ ಪಕ್ಷ ಸೋಲಬೇಕಾಗಿ ಬಂತು. ಈ ಬಾರಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.ಕಾವೇರಿ ಹಾಗೂ ಕೃಷ್ಣಾ ನದಿ ನೀರಿನ ವಿಷಯ ಸಂಸತ್ತಿನಲ್ಲಿ ಚರ್ಚೆ ಬಂದಾಗ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಗಳು ಧ್ವನಿ ಎತ್ತುವುದಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ಮಾತ್ರ ಮಾತನಾಡುತ್ತಾರೆ. ನಮ್ಮ ಹಕ್ಕು ಉಳಿಸಿಕೊಳ್ಳಲು ದೇವೇಗೌಡ ಅವರ ಕೈ ಬಲಪಡಿಸಬೇಕು ಎಂದು ಅವರು ಮನವಿ ಮಾಡಿದರು. ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ. ಗೊಂದಲದಲ್ಲಿ ಮುಳುಗಿದೆ. ಜನಪರ ಕೆಲಸಗಳು ಆಗುತ್ತಿಲ್ಲ ಎಂದು ಟೀಕಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.