ಗುರುವಾರ , ಏಪ್ರಿಲ್ 15, 2021
24 °C

ಮಂಡ್ಯ: ವಿಶಿಷ್ಟ ಸಂಚಾರ ಸೇವಾ ಪದಕ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಜನರ ನಡುವಿನ ಸಂಪರ್ಕ ಕೊಂಡಿಯಾಗಿ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್‌ಎನ್‌ಎಲ್) ಉತ್ತಮ ಕೆಲಸ ಮಾಡುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ ಹೇಳಿದರು.ನಗರದಲ್ಲಿ ಸೋಮವಾರ ಬಿಎಸ್‌ಎನ್‌ಎಲ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಮಟ್ಟದ ವಿಶಿಷ್ಟ ಸಂಚಾರ ಸೇವಾ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ಉತ್ತಮ ಕೆಲಸವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಖಾಸಗಿ ಸಂಸ್ಥೆಗಳ ಪೈಪೋಟಿಯ ನಡುವೆಯೂ ಬಿಎಸ್‌ಎನ್‌ಎಲ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.ತಹಶೀಲ್ದಾರ್ ಡಾ.ಬಿ.ಕೆ.ಮಮತಾ ಮಾತನಾಡಿ, ತಂಡವಾಗಿ ಕೆಲಸ ಮಾಡಿದಾಗಲೇ ಸಾಧನೆ ಸಾಧ್ಯವಾಗುತ್ತದೆ. ನಿಮ್ಮ ಸಹದ್ಯೋಗಿಗಳಿಗೆ ಸಿಕ್ಕಿರುವ ಪ್ರಶಸ್ತಿಗಳನ್ನು ನೋಡಿದರೆ ಉತ್ತಮ ಸೇವೆ ನೀಡುತ್ತಿರುವುದು ಗೊತ್ತಾಗುತ್ತದೆ ಎಂದು ಹೇಳಿದರು.ಬಿಎಸ್‌ಎನ್‌ಎಲ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಆನಂದದೇವ ಪ್ರಸಾದ್ ಮಾತನಾಡಿ, ಗ್ರಾಹಕರೇ ನಮ್ಮ ದೇವರು. ಅವರಿಗೆ ತೃಪ್ತಿಕರ ಸೇವೆ ಒದಗಿಸಬೇಕು. ಸಂಸ್ಥೆ ನಮಗೆ ಎಲ್ಲವನ್ನೂ ನೀಡಿದೆ ಎಂದು ಹೇಳಿದರು.ಮಂಡ್ಯ ಕಚೇರಿ ಉಪಕೇಂದ್ರದ ಎಂಜಿನಿಯರ್ ಸುವರ್ಣಾ ಮೂರ್ತಿ, ಹಿರಿಯ ಟಿಒಎ ಹಿಮಾದ್ರಿ ಶ್ರವಣ್, ದೂರವಾಣಿ ಮೆಕಾನಿಕ್ ಬಿ.ಎಸ್.ದಯಾನಂದ್ ಅವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಲೆಕ್ಕಾಧಿಕಾರಿ ಬಸವೇಗೌಡ ಇದ್ದರು.ಸರ್ಕಾರಿ ವೈದ್ಯರ ಪ್ರತಿಭಟನೆ

ಮಡಿಕೇರಿ:  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಉನ್ನತ ವೈದ್ಯಕೀಯ ಶಿಕ್ಷಣ ಇಲಾಖೆಯ ಸುಪರ್ದಿಗೆ ನೀಡಿರುವ ಜಿಲ್ಲಾ ಆಸ್ಪತ್ರೆಗಳನ್ನು ವಾಪಸ್ ತವರು ಇಲಾಖೆಗೆ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ವೈದ್ಯಾಧಿಕಾರಿಗಳು ಪ್ರತಿಭಟನೆ ನಡೆಸಿದರು.ಜಿಲ್ಲಾ ಆಸ್ಪತ್ರೆಯಿಂದ ಕೋಟೆ ಆವರಣಕ್ಕೆ ಮೆರವಣಿಗೆಯಲ್ಲಿ ಬಂದ ವೈದ್ಯಾಧಿಕಾರಿಗಳು, ತಮ್ಮ ಬೇಡಿಕೆಗಳ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಟ್ಟರು. ಮನವಿಯ ಪ್ರತಿಯನ್ನು ಸಂಘದ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಅನಿಲ್ ಧವನ್ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ನೀಡಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.