ಮಂಗಳವಾರ, ಜುಲೈ 14, 2020
24 °C

ಮಂತ್ರಾಲಯಕ್ಕೆ ರಸ್ತೆ ಸಂಪರ್ಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂತ್ರಾಲಯಕ್ಕೆ ರಸ್ತೆ ಸಂಪರ್ಕ ಸ್ಥಗಿತ

ರಾಯಚೂರು:   ಎರಡು ದಿನಗಳಿಂದ  ಸುರಿದ ಮಳೆಗೆ ರಾಯಚೂರು- ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ತುಂಗಭದ್ರಾ ನದಿಗೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.

ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ದ್ವಿಚಕ್ರವಾಹನ ಹಾಗೂ ಲಘು ವಾಹನಗಳ ಸಂಚಾರವೂ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.ರಾಜ್ಯ ಸರ್ಕಾರವು ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 1.67 ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ತಾತ್ಕಾಲಿಕ ಸೇತುವೆಯನ್ನು ನಿರ್ಮಾಣ ಮಾಡಿತ್ತು.ಒಂದೆರಡು ತಿಂಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಕುಸಿದು ಸುಮಾರು ಒಂದು ವಾರ ಸಂಚಾರ ಸ್ಥಗಿತಗೊಂಡಿತ್ತು.

ಆದರೆ, ಜಿಲ್ಲಾಡಳಿತ ತಾತ್ಕಾಲಿಕ ಸೇತುವೆಯನ್ನು ದುರಸ್ತಿಗೊಳಿಸಿ ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿತ್ತು.ಈಗ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದರಿಂದ ಮಂತ್ರಾಲಯಕ್ಕೆ ತೆರಳುವ ಭಕ್ತರು ರೈಲು ಮಾರ್ಗವಾಗಿ ಹೋಗುವುದು ಅನಿವಾರ್ಯವಾಗಿದೆ. ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೂ ಸಾಕಷ್ಟು ನಷ್ಟ ಸಂಭವಿಸುತ್ತಿದೆ.

ಒಂದೂವರೆ ವರ್ಷದಿಂದ ಈಶಾನ್ಯ ಸಾರಿಗೆ ಸಂಸ್ಥೆಗೆ ಪ್ರತಿದಿನ 1.50 ಲಕ್ಷ ರೂಪಾಯಿಗಳಷ್ಟು ನಷ್ಟವಾಗುತ್ತಿದೆ. ಅಲ್ಲದೇ ತುಂಗಭದ್ರಾ ಸೇತುವೆ ಮೇಲೆ ಹೋಗುತ್ತಿರುವ ಬಸ್‌ಗಳ ಸಂಚಾರವೂ ಸ್ಥಗಿತಗೊಳಿಸಲಾಗಿದೆ.ಈ ಸಂಸ್ಥೆಯಿಂದ ಬೆಂಗಳೂರಿಗೆ ತೆರಳುವ ಬಸ್‌ಗಳು ಸ್ಥಗಿತಗೊಳಿಸಲಾಗಿದೆ ಎಂದು ಈಶಾನ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ ಹಾನಗಲ್ `ಪ್ರಜಾವಾಣಿ~ಗೆ ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.