ಶುಕ್ರವಾರ, ಏಪ್ರಿಲ್ 23, 2021
24 °C

ಮಂತ್ರಾಲಯದಲ್ಲಿ ಚಿನ್ನದ ರಥೋತ್ಸವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂತ್ರಾಲಯದಲ್ಲಿ ಚಿನ್ನದ ರಥೋತ್ಸವ ಸಂಭ್ರಮ

ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 341ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ದಿನವಾದ ಶನಿವಾರ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ರಾಘವೇಂದ್ರ ಸ್ವಾಮಿಗಳ ಬೃಂದಾವನದ ವಿಶೇಷ ಪೂಜೆ ಹಾಗೂ ರಾಯರ ದರ್ಶನವನ್ನು ಪಡೆದು ಪುನೀತಭಾವ ಹೊಂದಿದರು. ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ಅಂಗವಾಗಿ ಶ್ರೀಮಠದ ಪ್ರಕಾರದಲ್ಲಿ ಚಿನ್ನದ ರಥೋತ್ಸವವನ್ನು ಸಾವಿರಾರು ಭಕ್ತರು ವೀಕ್ಷಿಸಿದರು.ಬೆಳಿಗ್ಗೆ ಆರಾಧನಾ ಮಹೋತ್ಸವ ಅಂಗವಾಗಿ ವಿವಿಧ ಪತ್ರಿಕೆಗಳು ಪ್ರಕಟಿಸಿದ ಪುರವಣಿಗಳನ್ನು ಪೀಠಾಧಿಪತಿ ಶ್ರೀ ಸುಯತೀಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದದಿಂದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ರಾಜಾ ಎಸ್ ಗೋಪಾಲಾಚಾರ್ ಹಾಗೂ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸುಯಮೀಂದ್ರಾಚಾರ್ ಬಿಡುಗಡೆ ಮಾಡಿದರು. ಭಾನುವಾರ ಉತ್ತರಾಧನೆ ಅಂಗವಾಗಿ ಪ್ರಹ್ಲಾದ ರಥೋತ್ಸವ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.