ಶಬರಿಮಲೆ (ಐಎಎನ್ಎಸ್): ಇಲ್ಲಿ ನಡೆಯುವ `ಮಕರ ಜ್ಯೋತಿ~ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಕೇರಳ ಸರ್ಕಾರ ಗುರುವಾರ ತಿಳಿಸಿದೆ.

`ಇದೇ 15ರಂದು ಕಾಣಿಸಿಕೊಳ್ಳುವ ಜ್ಯೋತಿಯನ್ನು ಬೆಟ್ಟದ ಪರಿಸರದಲ್ಲಿ ಎಲ್ಲರೂ ನಿಂತು ನೋಡಲು ವ್ಯವಸ್ಥೆ ಮಾಡಲಾಗಿದೆ. ಜನಜಂಗುಳಿ ನಿಯಂತ್ರಣಕ್ಕಾಗಿ ಈಗಾಗಲೇ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಯಾರೊಬ್ಬರಿಗೂ ಮರ ಹತ್ತಿ ಜ್ಯೋತಿ ವೀಕ್ಷಿಸಲು ಅವಕಾಶ ನೀಡುವುದಿಲ್ಲ~ ಎಂದು ರಾಜ್ಯದ ಮುಜರಾಯಿ ಖಾತೆ ಸಚಿವ ವಿ.ಎಸ್. ಶಿವಕುಮಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕಳೆದ ವರ್ಷ ಮಕರ ಜ್ಯೋತಿ ವೀಕ್ಷಿಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 100 ಭಕ್ತರು ಪ್ರಾಣ ಕಳೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.