ಮಕ್ಕಳನ್ನು ದುಡಿಸಿಕೊಂಡರೆ ಶಿಕ್ಷೆ

ಶನಿವಾರ, ಜೂಲೈ 20, 2019
28 °C

ಮಕ್ಕಳನ್ನು ದುಡಿಸಿಕೊಂಡರೆ ಶಿಕ್ಷೆ

Published:
Updated:

ಕೊಪ್ಪಳ: ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳುವವರಿಗೆ ನ್ಯಾಯಾಲಯ ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಗುರಿಪಡಿಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ.ಎಚ್.ಮಾಳಗಿ ಎಚ್ಚರಿಸಿದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ,

 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ  ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ತಪ್ಪಿತಸ್ಥರ ವಿರುದ್ಧ ಸಾಕ್ಷ್ಯಾಧಾರಗಳು ಪೂರಕವಾಗಿದ್ದಲ್ಲಿ ಅಂತಹವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಎಂದರು. ಹಿರಿಯ ವಿಭಾಗ ಸಿವಿಲ್ ನ್ಯಾಯಾಧೀಶ ಕೆ. ಶಿವರಾಂ, ಕಿರಿಯ ವಿಭಾಗ ಸಿವಿಲ್ ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್ ಸಹ ಮಾತನಾಡಿದರು.ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ ಮುಖ್ಯ ಅತಿಥಿಯಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry