ಬಂಗಾರಪೇಟೆ: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಎನಿಸುವ ಶಿಕ್ಷಣ ನೀಡಬೇಕಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಸಿ.ಆರ್.ಆಶೋಕ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹಂಚಾಳದ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ 27ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಜತೆಗೆ ಮಕ್ಕಳಲ್ಲಿ ನೈತಿಕ, ಮಾನವೀಯ ಮೌಲ್ಯಗಳನ್ನು ಬೆಳೆಸಬೇಕಿದೆ ಎಂದರು.

ಪ್ರಜಾಪ್ರಭುತ್ವದ ತತ್ವ, ಆದರ್ಶಗಳನ್ನು ರೂಢಿಸಿ ಮಕ್ಕಳಲ್ಲಿ ರಾಷ್ಟ್ರಪ್ರೇಮ ಬಿತ್ತಬೇಕು. ಆಧುನಿಕ ಸಮಾಜದಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳ ವಿರುದ್ಧ ಹೋರಾಡುವ ಛಲ ಅವರಲ್ಲಿ ತುಂಬಬೇಕು ಎಂದು ಶಿಕ್ಷಕರಿಗೆ ಸಲಹೆ ಮಾಡಿದರು.

ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ್ ಮಾತನಾಡಿ, 27 ವರ್ಷಗಳಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೆ ಸಾಮಾಜಿಕ ಚಟುವಟಿಕೆ ಬಗ್ಗೆ ತರಬೇತಿ ಕಾರ್ಯಾಗಾರ, ಎನ್ಎಸ್ಎಸ್ ಶಿಬಿರ, ರಕ್ತದಾನ ಶಿಬಿರ, ಗ್ರಾಮಗಳ ಸ್ವಚ್ಛತೆ, ನೈರ್ಮಲ್ಯ, ಧ್ಯಾನ, ಯೋಗ, ನೈತಿಕ ಮೌಲ್ಯಗಳ ಬಗ್ಗೆ ಪ್ರಾಯೋಗಿಕ ತಿಳಿವಳಿಕೆ ನೀಡಲಾಗುತ್ತಿದೆ ಎಂದರು.

ವಾರ್ಷಿಕೋತ್ಸವದ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಎಸ್ಎನ್ಆರ್ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಮೇಶ್ ಕುಮಾರ್ ಶಿಬಿರಕ್ಕೆ ಚಾಲನೆ ನೀಡಿದರು. ಶಿಕ್ಷಣ ಸಂಯೋಜಕ ಶ್ರೀರಾಮಯ್ಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.

ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪಿ.ಎಂ.ವೆಂಕಟೇಶ್, ಕಾರ್ಯದರ್ಶಿ ವೆಂಕಟಪತಿ, ಶಂಕರಪ್ಪ, ಡಾ.ನಾರಾಯಣಸ್ವಾಮಿ ಡಾ.ಎನ್.ಬಾಬು ಮಹೇಂದ್ರ ಪ್ರಸಾದ್, ಮುಖ್ಯಶಿಕ್ಷಕರಾದ ಲಕ್ಷ್ಮೀನಾರಾಯಣರೆಡ್ಡಿ, ಸತೀಶ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.