ಗುರುವಾರ , ನವೆಂಬರ್ 21, 2019
20 °C

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಲಹೆ

Published:
Updated:
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಲಹೆ

ಹಾಸನ: `ಶ್ರೇಷ್ಠತೆಯಿಂದ ಸರ್ವ ಶ್ರೇಷ್ಠತೆಯೆಡೆಗೆ ಸಾಗುವುದೇ ನಿಜವಾದ ಶಿಕ್ಷಣ, ಇಂಥ ಉತ್ತಮ ಶಿಕ್ಷಣವನ್ನು ಮಕ್ಕಳಿಗೆ ಧಾರೆ ಎರೆಯಲು ಪ್ರತಿ ಮನೆಯೂ ಸಂಸ್ಕಾರ ಕೇಂದ್ರವಾಗ ಬೇಕು' ಎಂದು ನಗರದ ನಿವೇದಿತಾ ವಿದ್ಯಾಸಂಸ್ಥೆ ಕಾರ್ಯದರ್ಶಿ ಅನಂತ ನಾರಾಯಣ ನುಡಿದರು.ಹಾಸನದ `ವೇದ ಭಾರತೀ' ಸಂಸ್ಥೆ ನಗರದ ರಾಮಕೃಷ್ಣ ವಿದ್ಯಾಲಯದಲ್ಲಿ ಆಯೋಜಿಸಿರುವ 10 ದಿನಗಳ `ಬಾಲ ಸಂಸ್ಕಾರ ಶಿಬಿರ' ಭಾನುವಾರ ಉದ್ಘಾ ಟಿಸಿ ಮಾತನಾಡಿದ ಅವರು, `ಮೆಕಾಲೆ ಪ್ರಣೀತ ವ್ಯವಸ್ಥೆಯಲ್ಲಿ ನಾವು ಹಣ ಸಂಪಾದನೆಯ ಶಿಕ್ಷಣಕ್ಕೆ ಜೋತು ಬಿದ್ದಿದ್ದೇವೆ. ನಮ್ಮ ಮಕ್ಕಳಿಗೆ ನಾವೇ ಮಾನಸಿಕ ಒತ್ತಡ ಹೇರುತ್ತಾ; ಅಂಕ ಗಳಿಕೆಯನ್ನೇ ಗುರಿಯಾಗಿಸಿ ಅವರಿಗೆ ಅವಿಧೇಯತೆ, ಸುಳ್ಳು ಹೇಳುವುದು; ಕಳ್ಳತನ, ವಂಚನೆ ಇತ್ಯಾದಿ ಕೆಟ್ಟ ಶಿಕ್ಷಣವನ್ನು ಪರೋಕ್ಷವಾಗಿ ಕಲಿಸು ತ್ತಿದ್ದೆೀವೆ. ಮಕ್ಕಳಿಗೆ ದುಡಿದು ತಿನ್ನು ವುದನ್ನು ಕಲಿಸದೆ; ಹೊಡೆದು ತಿನ್ನುವು ದನ್ನು ಕಲಿಸುತ್ತಿದ್ದೆೀವೆ ಎಂದರು.`ಸಂಸ್ಕಾರ ರಹಿತ ಶಿಕ್ಷಣ ಶಿಕ್ಷಣವೇ ಅಲ್ಲ, ಪಠ್ಯ ಕ್ರಮ ಆಧರಿಸಿದ ನೈತಿಕ ಶಿಕ್ಷಣವೂ ಬೇಕಾಗಿಲ್ಲ ಮನೆಗಳಲ್ಲಿ ಈ ಹಿಂದೆ ಇದ್ದಂತಹ ಉತ್ತಮ ಮೌಲ್ಯ ಗಳನ್ನೇ ಪುನರ್ ಪ್ರತಿಷ್ಠಾಪಿಸಬೇಕು; ಆಗ ಮಕ್ಕಳು ತಾವಾಗಿ ನೈತಿಕ ಮೌಲ್ಯ ಗಳನ್ನು ಅಳವಡಿಸಿಕೊಳ್ಳುತ್ತಾರೆ. ಪೋಷಕರೇ ಮಕ್ಕಳಿಗೆ ಮಾದರಿಯಾ ಗಬೇಕು' ಎಂದು ಅವರು ಹೇಳಿದರು.ಪ್ರಾಸ್ತಾವಿಕ ಮಾತನಾಡಿದ ವೇದ ಭಾರತೀ ಅಧ್ಯಕ್ಷ ಕ.ವೆಂ. ನಾಗರಾಜು, `ಶಿಬಿರದಲ್ಲಿ ಮಕ್ಕಳಿಗೆ ವೇದ ಮಂತ್ರ ಗಳನ್ನು ಆಧರಿಸಿ ಸಂಸ್ಕಾರ ನೀಡಲು ಪ್ರಯತ್ನಿಸಲಾಗುವುದು. ಇಲ್ಲಿ ಪಡೆದ ಸಂಸ್ಕಾರ ಜೀವನದಲ್ಲಿ ಮುಂದುವರಿ ಸಿಕೊಂಡು ಹೋಗಬೇಕು' ಎಂದರು.“ವೇದಸುಧೆ' ಬ್ಲಾಗ್ ಸಂಪಾದಕ ಹಾಗೂ ವೇದ ಭಾರತೀ ಪದಾಧಿಕಾರಿ ಹರಿಹರಪುರ ಶ್ರೀಧರ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಕಾರ್ಯ ದರ್ಶಿ ಚಿನ್ನಪ್ಪ ಹಾಜರಿದ್ದರು.ಈ ಬಾಲ ಸಂಸ್ಕಾರ ಶಿಬಿರದಲ್ಲಿ ಸುಮಾರು 60ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ವೇದಾಧ್ಯಾಯಿ ವಿಶ್ವನಾಥ ಶರ್ಮ ಮತ್ತಿತರರು ತರಬೇತಿ ನೀಡುವರು.

ಪ್ರತಿಕ್ರಿಯಿಸಿ (+)