ಸೋಮವಾರ, ಏಪ್ರಿಲ್ 19, 2021
24 °C

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ಶಾಸಕ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪೇಟೆ: ಕೌಟುಂಬಿಕ ನಿರ್ವಹಣೆಗಾಗಿ ಮಕ್ಕಳನ್ನು ಕ್ಲಿಷ್ಟಕರವಾದ ಕೆಲಸಗಳಿಗೆ ದೂಡದೆ, ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಮುಂದಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಅಶ್ವತ್ಥನಾರಾಯಣ ತಿಳಿಸಿದರು.ತಾಲ್ಲೂಕಿನ ದೊಡ್ಡಯಾಚೇನಹಳ್ಳಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನೆರವಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಾಮಿಯಾ ಮಸೀದಿ ಹಾಗೂ ಶಾದಿ ಮಹಲ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಶುಕ್ರವಾರ ಅವರು ಮಾತನಾಡಿದರು. ಬಹಳಷ್ಟು ಮುಸ್ಲಿಂ ಕುಟುಂಬಗಳು ಆರ್ಥಿಕ ಸಮಸ್ಯೆ ಎದುರಿಸುತ್ತಿವೆ.ಕುಟುಂಬದ ಬಹುತೇಕ ಸದಸ್ಯರು ಅನಕ್ಷರಸ್ಥರಾದ್ದರಿಂದ ಉತ್ತಮವಾದ ಉದ್ಯೋಗಾವಕಾಶಗಳು ದೊರೆಯುತ್ತಿಲ್ಲ.  ಈ ನಿಟ್ಟಿನಲ್ಲಿ ಮುಸ್ಲಿಮರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಶಿಕ್ಷಣ ಅವಶ್ಯವಾಗಿದ್ದು, ಕಡ್ಡಾಯವಾಗಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಮನವಿ ಮಾಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಬಿ.ಚಂದ್ರಶೇಖರ್ ವೈವಿಧ್ಯತೆಗಳಿಂದ ಕೂಡಿರುವ ವಿವಿಧ ಧರ್ಮಗಳ ನಡುವಿನ ಉತ್ತಮ ಸಂಬಂಧದಿಂದ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ನ್ಯಾಯ, ಸತ್ಯ, ಧರ್ಮದ ಮಾರ್ಗಗಳನ್ನೇ ಬೋಧಿಸುವ ಎಲ್ಲ ಧರ್ಮಗಳ ಜನರು ತಾಲ್ಲೂಕಿನಲ್ಲಿ ಭ್ರಾತೃತ್ವದಿಂದ ಬದುಕಬೇಕು ಎಂದು ತಿಳಿ ಹೇಳಿದರು.ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮಜರ್‌ಪಾಷ, ಸದಸ್ಯ ಖಾಸಿಂಸಾಬ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ನಯಾಜ್ ಅಹಮದ್, ತಾಲ್ಲೂಕು ಅಧ್ಯಕ್ಷ ರಫೀಕ್ ಅಹಮದ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಭಾರತಿ ಅಶೋಕ್, ಜಾಮಿಯಾ ಮಸೀದಿ ಅಧ್ಯಕ್ಷ ಬಶೀರ್ ಅಹಮದ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಪ್ರೆಸ್ ಕುಮಾರಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಬಿ.ಸಿ.ಹರ್ಷ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಬಂಡಿಹೊಳೆ ಅಶೋಕ್, ಮುಖಂಡರಾದ ವರದರಾಜೇಗೌಡ, ಕೆ.ಎನ್.ಪರಮೇಶ್ವರ್, ಪಾಪೇಗೌಡ, ಅಮೀರ್‌ಜಾನ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸೂರ್ಯಪ್ರಭಾ, ಮಾಧವ ಪ್ರಸಾದ್, ಮಾಜಿ ಸದಸ್ಯರಾದ ಸಿದ್ದಿಖ್, ಗೌಸ್‌ಖಾನ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.