ಶನಿವಾರ, ಮೇ 28, 2022
30 °C

ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕಡ್ಡಾಯ ಶಿಕ್ಷಣ ಕಾಯ್ದೆ ಜಾರಿಗೆ ಬಂದರೆ ಮಾತ್ರ ಜವಾಬ್ದಾರಿ ಮುಗಿಯಲಿಲ್ಲ.  ಮಕ್ಕಳು ಶಾಲೆಗೆ ಬರುವಂತೆ ಮಾಡುವುದು ಕೂಡ ಮುಖ್ಯವಾಗುತ್ತದೆ~ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು. ಸ್ವಯಂ ಸೇವಾ ಸಂಸ್ಥೆಗಳಾದ ಬಚ್ಪನ್ ಬಚಾವೋ ಆಂದೋಲನ, ಸ್ಪರ್ಶ ಟ್ರಸ್ಟ್ ಮತ್ತು ಮಕ್ಕಳ ಹಕ್ಕುಗಳ ಟ್ರಸ್ಟ್ ಜಂಟಿಯಾಗಿ ಸರ್ವ ಶಿಕ್ಷಣ ಅಭಿಯಾನದಲ್ಲಿ ಗುರುವಾರ ಏರ್ಪಡಿಸಿದ್ದ `ಶಿಕ್ಷಣದ ಹಕ್ಕಿಗಾಗಿ ಬೆಂಗಳೂರುನಡಿಗೆ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.`ಶ್ರೀಮಂತರ ಮನೆಯಲ್ಲಿ ಕೆಲಸ ಮಾಡುವ ಮಕ್ಕಳನ್ನು ಅತಿ ಕ್ರೂರವಾಗಿ ನಡೆಸಿಕೊಳ್ಳಲಾಗುತ್ತದೆ. ಇದು ತಪ್ಪಬೇಕು. ಎಲ್ಲ ಮಕ್ಕಳಿಗೂ ಕಡ್ಡಾಯ ಶಿಕ್ಷಣ ದೊರೆಯಬೇಕು~ ಎಂದು ಒತ್ತಾಯಿಸಿದರು.ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕುಮಾರ್ ನಾಯಕ್ ಮಾತನಾಡಿ, `ಸರ್ಕಾರ ಅಥವಾ ಸರ್ಕಾರಿ ಇಲಾಖೆಗಳಷ್ಟೇ ಭಾಗವಹಿಸಿದರೆ ಯಾವ ಯೋಜನೆಗಳು ಯಶಸ್ವಿಯಾಗುವುದಿಲ್ಲ. ಅದಕ್ಕೆ ಎಲ್ಲರೂ ಕೈ ಜೋಡಿಸಬೇಕು~ ಎಂದರು.`ಯಾವುದೇ ಕಾರ್ಯಕ್ಕೆ ಓದು ಬಹಳ ಮುಖ್ಯವಾಗುತ್ತದೆ. ಓದು ಒಂದು ರೀತಿಯಲ್ಲಿ ಸಿಮೆಂಟ್ ತರಹದಲ್ಲಿ ಕಟ್ಟುವ ಕೆಲಸವನ್ನು ಮಾಡುತ್ತದೆ. ಅಂತಹ ಓದು ಎಲ್ಲರಿಗೂ ದೊರೆಯುವಂತಾಗಲಿ ಎಂಬ ಆಶಯ ಸರ್ಕಾರಕ್ಕಿದೆ~ ಎಂದು ಹೇಳಿದರು.ಶಿಕ್ಷಣಕ್ಕಾಗಿ ಬೆಂಗಳೂರು ನಡಿಗೆ ಕಾರ್ಯಕ್ರಮವು ಜೂನ್ 12 ರವರೆಗೆ ಬೆಂಗಳೂರಿನ ವಿವಿಧೆಡೆಗಳಲ್ಲಿ ನಡೆಯಲಿದೆ. ಜನರಲ್ಲಿ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ದೊರೆಯುವಂತೆ ಮಾಡಿ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಬೇಕೆಂಬ ಉದ್ದೇಶವನ್ನು ಹೊಂದಿದೆ.ಕಾರ್ಮಿಕ ಇಲಾಖೆ ಆಯುಕ್ತ ಎಸ್.ಆರ್.ಉಮಾಶಂಕರ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ನೀನಾ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಕೆ.ಎಸ್.ಪ್ರಭಾಕರ್, ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ತುಷಾರ್ ಗಿರಿನಾಥ್ ಮುಂತಾದವರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.