ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ: ಸಲಹೆ

7

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ: ಸಲಹೆ

Published:
Updated:

ಬೊಮ್ಮನಹಳ್ಳಿ: ‘ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ಸಮಾಜವನ್ನು  ನಿರ್ಮಾಣ ಮಾಡುವ ಜವಾಬ್ದಾರಿ  ಶಿಕ್ಷಕರ ಮೇಲಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.ಬೆಂಗಳೂರು ದಕ್ಷಿಣ ವಲಯ 3 ರ ಶಿಕ್ಷಕರ ಸಂಘದ ವತಿಯಿಂದ ಬನ್ನೇರು­ಘಟ್ಟ ರಸ್ತೆಯ ಮೀನಾಕ್ಷಿ ಕಲ್ಯಾಣ ಮಂಟಪದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ‘ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ’  ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಬೆಂಗಳೂರು ದಕ್ಷಿಣ ಜಿಲ್ಲಾ ಉಪನಿರ್ದೇಶಕಿ ಕೆ.ಪದ್ಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮುನಿರೆಡ್ಡಿ, ಸಮಾಜ ಸೇವಕ ಸ್ವರೂಪ್ ಕುಮಾರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ವಿ.ಎಂ. ನಾರಾಯಣಸ್ವಾಮಿ,  ರಾಮೋಜಿಗೌಡ, ಸಿದ್ದಪ್ಪ, ರೇವಮ್ಮ  ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry