ರಾಮನಗರ: ಮಕ್ಕಳು ತಮ್ಮ ಬಾಲ್ಯಾವಸ್ತೆಯಲ್ಲಿಯೇ ಪ್ರಾಮಾಣಿಕತೆಯನ್ನು ಅನುಕರಿಸಬೇಕು. ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸಹಬಾಳ್ವೆ, ಗುರು ಹಿರಿಯರಿಗೆ ಗೌರವ ಕೊಡುವ ಮೌಲ್ಯಗಳನ್ನು ಅನುಸರಿಸುವುದನ್ನು ಕಲಿಯಬೇಕು ಎಂದು ಗ್ರಾಮದ ಹಿರಿಯ ನಾಗರಿಕ ಟಿ. ಪಿ ರಾಮಯ್ಯ ಕಿವಿಮಾತು ಹೇಳಿದರು.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರದ ಮಾರುತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಿಪ್ಪಸಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ನಾಗರಾಜ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆ ಮೂಲಕ ತಂದೆ-ತಾಯಿಗಳಿಗೆ ಕೀರ್ತಿ ತರುವಂತಹ ಹೊನ್ನ ಹೂಗಳಾಗಳಾಗಬೇಕು ಎಂದರು.

ತಿಪ್ಪಸಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಈ ವರ್ಷ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿರುವ ದಾನಿಗಳಾದ ಟಿ. ಜಿ ವೆಂಕಟೇಶ್ , ವನಜಾಕ್ಷಿ ಸುರೇಶ್, ವೆಂಕಟರಮಣ ಶೆಟ್ಟಿ, ಉಮೇಶ್, ಜಿ. ರಾಮಣ್ಣ, ಚಂದ್ರಣ್ಣ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಆಟೋಟಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಗ್ರಾಮಸ್ಥರ ಗಮನಸೆಳೆದವು.

ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ವನಿತಾ ಗಂಗರಾಜು, ನೇರಳೆಕೆರೆ ಶ್ರೀನಿವಾಸ್, ಗಂಗರಾಜು, ಸಹ ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.