ಸೋಮವಾರ, ಅಕ್ಟೋಬರ್ 14, 2019
29 °C

ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯ

Published:
Updated:
ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯ

ಶಿವಮೊಗ್ಗ: ಇಂದಿನ ಮಕ್ಕಳಿಗೆ ನೈತಿಕ ಮತ್ತು ಮೌಲಿಕ ಶಿಕ್ಷಣ ನೀಡಬೇಕಾದ ಅಗತ್ಯವಿದೆ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.ನಗರದ ಕುವೆಂಪು ರಂಗಮಂದಿರದಲ್ಲಿ ಗುರುವಾರ ತಾಲ್ಲೂಕು ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಶಿಕ್ಷಕರ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರ ಎಲ್ಲಾ ಸಭೆ-ಸಮಾರಂಭಗಳಲ್ಲಿ ಶಿಕ್ಷಕರ ಸಮಸ್ಯೆಗಳು ಹಾಗೂ ಶಿಕ್ಷಕರಿಗೆ ಸಿಗಬೇಕಾದ ಸೌಲಭ್ಯ ಕುರಿತು ಚರ್ಚೆಗಳು ಆಗುತ್ತಿವೆ. ಆದರೆ, ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಮಕ್ಕಳಿಗೆ ನೀಡಬೇಕಾದ ಶಿಕ್ಷಣದ ಕುರಿತು ಚರ್ಚೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ದೇಶಾದ್ಯಂತ ಏಕಕಾಲದಲ್ಲಿ ಉನ್ನತ ಶಿಕ್ಷಣಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ನಡೆಯಲಿದೆ. ಶಿಕ್ಷಕರ ಭವನ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ರೂ 10ಲಕ್ಷ  ನೆರವು ನೀಡಲಾಗುವುದು ಎಂದರು.ಬಿಜೆಪಿ ಘಟಕದ ರಾಜ್ಯ ಅಧ್ಯಕ್ಷ ಶಾಸಕ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು.  ಸರ್ಫ್ರಾಜ್ ಚಂದ್ರಗುತ್ತಿ ವಿಶೇಷ ಉಪನ್ಯಾಸ ನೀಡಿದರು. ಜಿ.ಪಂ. ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ಶಾಸಕ ಕೆ.ಜಿ. ಕುಮಾರಸ್ವಾಮಿ, ರಾಜ್ಯ ನೌಕರರ ಸಂಘದ ಅಧ್ಯಕ್ಷ ಎಲ್. ಭೈರಪ್ಪ, ಜಿಲ್ಲಾ ಅಧ್ಯಕ್ಷ ರಘುರಾಮ ದೇವಾಡಿಗ, ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ್, `ಸೂಡಾ~ ಅಧ್ಯಕ್ಷ ಜ್ಞಾನೇಶ್ವರ್, ಡಿಡಿಪಿಐ ಪರಮಶಿವಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಕಮಲಾಕರ್, ತಾ.ಪಂ. ಅಧ್ಯಕ್ಷೆ  ಮಂಜುಳಾ ಲಿಂಗರಾಜ್ ಉಪಸ್ಥಿತರಿದ್ದರು.

 

Post Comments (+)