ಪರಶುರಾಂಪುರ: ಮಕ್ಕಳಲ್ಲಿ ನೈತಿಕತೆ ಬೆಳೆಸುವಂತಹ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಟಿ. ರಘುಮೂರ್ತಿ ಕರೆ ನೀಡಿದರು.

ಸಮೀಪದ ಪಿ. ಮಹದೇವಪುರ ಜ್ಞಾನವಿಕಾಸ ಶಾಲೆಯಲ್ಲಿ ಭಾನುವಾರ ನಡೆದ `ನೂತನ ಕೊಠಡಿ ಉದ್ಘಾಟನೆ ಹಾಗೂ ಪೋಷಕರ ದಿನಾಚರಣೆ~ಯಲ್ಲಿ ಅವರು ಮಾತನಾಡಿದರು.

ಮಕ್ಕಳಲ್ಲಿರುವ ಸಾಮರ್ಥ್ಯ ಗುರುತಿಸಿ, ಅವರ ಆಸಕ್ತಿಗೆ ಪೂರಕವಾದ ವಾತವರಣ ಕಲ್ಪಿಸುವ ಉತ್ತಮ ಸಾಧನೆ ಮಾಡುವ ಅವಕಾಶ ಶಿಕ್ಷಣ ಸಂಸ್ಥೆಗಳು ಒದಗಿಸಿ ಕೊಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ತಾ.ಪಂ. ಸದಸ್ಯ ನರಸಿಂಹಯ್ಯ ಮಾತನಾಡಿ, ಆಂಧ್ರ ಗಡಿಯಲ್ಲಿ ಶಾಲೆ ತೆರೆಯುವ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.

ಜಿಲ್ಲಾ ನವಜಾಗೃತಿ ವೇದಿಕೆ ಅಧ್ಯಕ್ಷ ಚಿತ್ರಲಿಂಗಪ್ಪ ಮಾತನಾಡಿ, ಪ್ರತಿ ಪೋಷಕರು ತಮ್ಮ ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿ ಇರಬೇಕು ಎಂದು ಆಶಿಸುವುದರ ಬದಲಾಗಿ, ಸಮಾಜ ಸೇವಕರಾಗಿ ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೊಡುಗೆ ನೀಡುವವರಾಗಲಿ ಎಂದು ಆರೈಸಬೇಕು ಎಂದು ಹೇಳಿದರು.

ತಾಲ್ಲೂಕು ಪಂಚಾಯ್ತಿ ಸದಸ್ಯ ವೆಂಕಟೇಶ್ ಮಾತನಾಡಿ, ಮಕ್ಕಳು ಶ್ರದ್ಧೆಯಿಂದ ಕಲಿತು ತಂದೆ- ತಾಯಿ, ಗುರುಗಳಿಗೆ, ಸಂಸ್ಥೆಗೆ, ಗ್ರಾಮಕ್ಕೆ ಕೀರ್ತಿ ತಂದು ಒಳ್ಳೆ ಹೆಸರು ಗಳಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಚ್. ರಾಮಚಂದ್ರಪ್ಪ ಮಾತನಾಡಿ, ಮಕ್ಕಳಿಗಾಗಿ ಆಸ್ತಿ ಮಾಡುವ ಬದಲಿಗೆ ಮಕ್ಕಳನ್ನೇ ಆಸ್ತಿಯನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಗೋವರ್ಧನ್, ಕಟ್ಟಾ ನರಸಿಂಹಮೂರ್ತಿ, ಗುರುಲಿಂಗಪ್ಪ, ಚಿತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.