ಮಂಗಳವಾರ, ಏಪ್ರಿಲ್ 20, 2021
27 °C

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ  ಭಾರೀ ಅವ್ಯವಹಾರ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಬಹಿರಂಗ ಪಡಿಸಿದೆ. ಅದರಲ್ಲಿ ಕರ್ನಾಟಕ ಬಹುಪಾಲು ಪಡೆದಿದೆ.ಈ ಅವ್ಯವಹಾರದಲ್ಲಿ  ಖಾಸಗಿ ಗುತ್ತಿಗೆದಾರರು  ಜೊತೆಗೆ ರಾಜಕಾರಣಿಗಳು,ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ ಎಂದಾದರೆ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಮಕ್ಕಳಿಗೆ ಪೌಷ್ಟಿಕ ಆಹಾರವಾದರೂ ಎಲ್ಲಿ ದೊರೆಯುತ್ತದೆ?  ಕರ್ನಾಟಕದಲ್ಲೆಗ 68 ಸಾವಿರ ಅಪೌಷ್ಟಿಕ ಮಕ್ಕಳು ಇದ್ದಾರೆ. ಸರ್ಕಾರ ಅದರ ನಿವಾರಣೆಗೆ ಕೋಟಿಗಟ್ಟಲೆ ಅನುದಾನ ಬಿಡುಗಡೆ ಮಾಡುತ್ತಿದೆ ಅದು ಗುತ್ತಿಗೆದಾರರ ಮತ್ತು ಅಧಿಕಾರಿಗಳ ಕೈ ಸೇರಿದರೆ ಅದಕ್ಕೆ ಹೊಣೆ ಯಾರು? ಆದ್ದರಿಂದ ಕೂಡಲೇ ಮುಖ್ಯಮಂತ್ರಿಗಳು ಇನ್ನೂ ಮುಂದೆಯಾದರು ಇಂತಹ ಅವ್ಯವಹಾರ ನಡೆಯದಂತೆ ಸೂಕ್ತ ಕ್ರಮ ಕೈಗೊಂಡು ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲಿ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.