ರಾಮನಗರ: ಮಕ್ಕಳು ಸೂಕ್ಷ್ಮ ಮನಸ್ಸು ಹೊಂದಿರುವುದರಿಂದ ದೈಹಿಕ ಶಿಕ್ಷಕರು ಎಚ್ಚರ ಹಾಗೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಇಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಂಟಿಯಾಗಿ ನಗರದ ಗುರುಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಲ್ಲಿ ಶಿಸ್ತು ಕಲಿಸುವ ಮಹತ್ವದ ಕಾರ್ಯ ದೈಹಿಕ ಶಿಕ್ಷಕರದ್ದಾಗಿದೆ. ಆದರೆ ಯಾರೋ ಒಬ್ಬರು ಶಿಕ್ಷಕರು ಮಾಡುವ ಆಚಾತುರ್ಯಗಳಿಂದ ಇಡೀ ದೈಹಿಕ ಶಿಕ್ಷಣ ಸಮುದಾಯದ ಶಿಕ್ಷಕರಿಗೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದರು.

ಕೆಲ ಪುರುಷ ದೈಹಿಕ ಶಿಕ್ಷಕರು ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸಿದ ಕಾರಣ ಇತರ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಣ ಸಮುದಾಯವನ್ನು ಪ್ರತಿನಿಧಿಸುವವರು ತಲೆ ತಗ್ಗಿಸುವಂತಾಗಿದೆ. ಮಕ್ಕಳನ್ನು ದಂಡಿಸುವ ಬದಲಿಗೆ ಪ್ರೀತಿ, ವಿಶ್ವಾಸದಿಂದ ಶಿಸ್ತು ಮತ್ತು ಸಂಯಮ ಕಲಿಸುವಂತೆ ಕಿವಿಮಾತು ಹೇಳಿದರು.

ಶಿಕ್ಷಕರು ಜವಾಬ್ದಾರಿಯಿಂದ ತಮ್ಮ ಕಾರ್ಯ ನಿರ್ವಹಿಸಿದರೆ, ಶಿಕ್ಷಕರನ್ನು ಪ್ರತಿನಿಧಿಸುವ ನಾವುಗಳ ನಿಮ್ಮ ರಕ್ಷಣೆಗೆ ಬರುತ್ತೇವೆ. ಆದರೆ ನೀವೇ ಕೆಟ್ಟ ಹೆಸರು ಬರುವ ರೀತಿಯಲ್ಲಿ ನಡೆದುಕೊಂಡರೆ ನಿಮ್ಮಗಳ ರಕ್ಷಣೆಗೆ ನಾವು ಹೇಗೆ ಬರಲು ಸಾಧ್ಯವಾಗುತ್ತದೆ ಎಂದು ಅವರು ಪ್ರಶ್ನಿಸಿದರು.

ದೈಹಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳು ಬದಲಾಗಬೇಕಿವೆ. ಹಿಂದೆ ಶಿಕ್ಷಣ ಸಚಿವರಾಗಿದ್ದ ಬಸವರಾಜ ಹೊರಟ್ಟಿ ಅವರು ಈ ನಿಯಮಾವಳಿಗಳನ್ನು ಜಾರಿಗೊಳಿಸಲು ಮುಂದಾಗಿದ್ದರು. ಆದರೆ ಈಗಿನ ಸರ್ಕಾರ ಇದಕ್ಕೆ ತಡೆಯೊಡ್ಡಿದೆ. ಇದು ಇವತ್ತಲ್ಲ, ನಾಳೆ ಆಗಲೇ ಬೇಕು. ಈ ಸಂಬಂಧ ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದು ಅವರು ಹೇಳಿದರು.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಇದೆ. ಇದರಿಂದ ನೀತಿ ಸಂಹಿತೆ ಜಾರಿ ಆಗಿದೆ. ಆದ್ದರಿಂದ ಜೂನ್ ಜುಲೈನಿಂದ ಶಿಕ್ಷಕರ ಸಮಸ್ಯೆಗಳ ಬಗೆಹರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ನಿರಂತರ ಹೋರಾಟಗಳನ್ನು ನಡೆಸಲಾಗುವುದು ಎಂದರು. ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಚಳವಳಿ ನಡೆಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ರಾಮನಗರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಜಾತಾ ಶಿವಲಿಂಗಯ್ಯ ಮಾತನಾಡಿ, ಉತ್ತಮ ಮಕ್ಕಳು, ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ದೈಹಿಕ ಶಿಕ್ಷಕರ ಪಾತ್ರ ಹೆಚ್ಚಿದೆ. ವಿದ್ಯಾರ್ಥಿಗಳಲ್ಲಿ ಆತ್ಮ ಸ್ಥೈರ್ಯ ಹೆಚ್ಚಿಸಿ ಸ್ಪರ್ಧಾ ಮನೋಭಾವ ಬೆಳೆಸುವಲ್ಲಿ ದೈಹಿಕ ಶಿಕ್ಷಕರು ಮಹತ್ವದ ಪಾತ್ರವಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾನೂನು ಸಲಹೆಗಾರ ಕೆ.ಬೋರಯ್ಯ ಅವರು ಮಾತನಾಡಿ, 1ರಿಂದ 9ನೇ ತರಗತಿವರೆಗೂ ದೈಹಿಕ ಶಿಕ್ಷಣ ಪಠ್ಯವನ್ನು ಕಡ್ಡಾಯ ಮಾಡಲಾಗಿದೆ. 10ನೇ ತರಗತಿಗೂ ಪಠ್ಯ ಸಿದ್ಧಪಡಿಸಲಾಗುತ್ತಿದೆ. ಆದರೆ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಾದ್ದರಿಂದ ಕೆಲ ಗೊಂದಲಗಳು ಉಂಟಾಗಿವೆ ಎಂದು ಅವರು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಕೆ.ಬೈರಲಿಂಗಯ್ಯ ಮಾತನಾಡಿ, ದೈಹಿಕ ಶಿಕ್ಷಣ ಇಲ್ಲದೆ ಶಿಕ್ಷಣ ಇಲ್ಲ. ಶಾಲೆಯಲ್ಲಿ ಮುಖ್ಯ ಶಿಕ್ಷಕರಷ್ಟೇ ಜವಾಬ್ದಾರಿಯುತವಾದ ಕಾರ್ಯ ದೈಹಿಕ ಶಿಕ್ಷಕರದ್ದು. ಆದ್ದರಿಂದ ಮುಖ್ಯ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರನ್ನು ಒಂದೇ ನಾಣ್ಯದ ಎರಡು ಮುಖಗಳು ಎಂದರೆ ತಪ್ಪಾಗದು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಮ್ಮ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಕೃಷ್ಣಯ್ಯ ಮಾತನಾಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಸಿದ್ದರಾಜು, ತಾ. ಪ್ರಾ. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಜೆ.ಬಸವೇಗೌಡ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಎಲ್.ನಾಗರಾಜು, ಪದಾಧಿಕಾರಿಗಳಾದ ಟಿ.ರೇಣುಕಯ್ಯ, ನೀಲಕಂಠಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.