ಬೆಂಗಳೂರು: ‘ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತ್ಯೇಕ ‘ಮಕ್ಕಳ ಆಯೋಗ’ವನ್ನು ಸ್ಥಾಪಿಸಬೇಕು’ ಎಂದು ಕ್ರಿಸ್ಪ್ ಸಂಸ್ಥೆಯ ಅಧ್ಯಕ್ಷ ಕುಮಾರ್ ಜಾಗೀರ್ದಾರ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯು ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾತ್ರ ಯೋಜನೆಗಳನ್ನು ರೂಪಿಸುತ್ತಿದೆ. ಮಕ್ಕಳಿಗೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ದೂರಿದರು.

ಸರ್ವ ಶಿಕ್ಷಣ ಅಭಿಯಾನವನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿ ಶಾಲೆಗಳಲ್ಲಿ 18 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಬೇಕು. ಲೈಂಗಿಕ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.