ಬುಧವಾರ, ಏಪ್ರಿಲ್ 14, 2021
24 °C

ಮಕ್ಕಳ ಗ್ರಂಥಾಲಯ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಚಿಣ್ಣರಿಗಾಗಿಯೇ ಮಕ್ಕಳ ಗ್ರಂಥಾಲಯ ತೆರೆಯಲಾಗಿದೆ. ಈ ಗ್ರಂಥಾಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಜವಾಬ್ದಾರಿ ಸಮುದಾಯ, ಗ್ರಾಮ ಪಂಚಾಯಿತಿ, ಶಿಕ್ಷಣಾಸಕ್ತರು ಹಾಗೂ ಪೋಷಕರ ಮೇಲಿದೆ~ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಸಹ ನಿರ್ದೇಶಕ ನಾಗಸಿಂಹ ಜಿ. ರಾವ್ ಹೇಳಿದರು.

ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್, ಮೊಬಿಲಿಟಿ ಇಂಡಿಯಾ ಸಂಸ್ಥೆ ಹಾಗೂ ಕುಲಗಾಣ ಗ್ರಾಮ ಪಂಚಾಯಿತಿಯಿಂದ ತಾಲ್ಲೂಕಿನ ಚಿಕ್ಕಬೇಗೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ನಡೆದ ಮಕ್ಕಳ ಗ್ರಂಥಾಲಯದ ಉದ್ಘಾಟನೆ ಮತ್ತು ಗ್ರಂಥಾಲಯ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಂಥಾಲಯಗಳಿಂದ ನಮ್ಮ ಜ್ಞಾನ ಭಂಡಾರ ವೃದ್ಧಿಸಲಿದೆ. ಗ್ರಾಮಸ್ಥರು ಸ್ವಚ್ಛತೆಗೂ ಮೊದಲು ಆದ್ಯತೆ ನೀಡಬೇಕು ಎಂದು ಹೇಳಿದರು.ತಾಲ್ಲೂಕು ಪಂಚಾಯಿತಿ ಸದಸ್ಯೆ ರಾಣಿ ಮಾತನಾಡಿ, ಗ್ರಾಮೀಣ ಮಕ್ಕಳ ಗ್ರಂಥಾಲಯ ಪ್ರಾರಂಭಿಸುತ್ತಿರುವುದು ಶ್ಲಾಘನೀಯ. ಪ್ರತಿಯೊಂದು ಮನೆಯಲ್ಲೂ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಆರೋಗ್ಯ, ಸ್ವಚ್ಛತೆಗೆ ಜನರು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.ಕುಲಗಾಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಎಸ್. ಮಮತಾ ಮಾತನಾಡಿ, ನಿರ್ಮಲ ಭಾರತ ಅಭಿಯಾನದಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಹೆಚ್ಚು ಪ್ರೋತ್ಸಾಹಧನ ಲಭಿಸುತ್ತಿದೆ.ಅಭಿಯಾನದಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೂ.4,600 ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ 5,400 ರೂ ಸಿಗಲಿದೆ. ಗ್ರಾಮೀಣ ಕುಟುಂಬದ ಸದಸ್ಯರು ಈ ಪ್ರೋತ್ಸಾಹಧನದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಮೊಬಿಲಿಟಿ ಇಂಡಿಯಾ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ  ಎಸ್.ಎನ್.ಆನಂದ್ ಮಾತನಾಡಿ, ಗ್ರಂಥಾಲಯದ ಮಹತ್ವ, ಬಳಕೆ, ಶಾಲೆ ಮತ್ತು ಸಮುದಾಯದ ಸಹಕಾರ ಕುರಿತು ಮಾಹಿತಿ ನೀಡಿದರು.ಅಧ್ಯಕ್ಷತೆವಹಿಸಿದ್ದ ಕುಲಗಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್. ಮಧುಚಂದ್ರ ಮಾತನಾಡಿ, `ಸಂಸ್ಥೆಯಿಂದ ಗ್ರಂಥಾಲಯ ಸ್ಥಾಪಿಸಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಶ್ಲಾಘನೀಯ~ ಎಂದರು.

ಕಾರ್ಯಕ್ರಮದಲ್ಲಿ ಮುಕ್ಕಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಪರಾಜು, ಸದಸ್ಯರಾದ ಎನ್. ಕುಮಾರ, ರಂಗಸ್ವಾಮಿ, ರೇವಣ್ಣ, ಎಸ್‌ಡಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಶಿಕ್ಷಕ ಕೆಂಪನಂಜಯ್ಯ, ಸಂಪತ್, ಸಂಸ್ಥೆಯ ನಂದೀಶ್, ಅನಿಲ್‌ಕುಮಾರ್,ಅಂಗವಿಕಲರ ಸ್ವಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.