ಮಕ್ಕಳ ದಾಖಲಾತಿ ಆಂದೋಲನ

ಗುರುವಾರ , ಜೂಲೈ 18, 2019
24 °C

ಮಕ್ಕಳ ದಾಖಲಾತಿ ಆಂದೋಲನ

Published:
Updated:

ಕುಶಾಲನಗರ: ಸಮೀಪದ ಗಡ್ಡೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಸೋಮವಾರ ಶಾಲಾ ದಾಖಲಾತಿ ಆಂದೋಲನಾ ಜಾಗೃತಿ ಜಾಥಾ ನಡೆಯಿತು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಕ್ಕಳು ಜಾಥಾ ನಡೆಸಿ, ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವಂತೆ ಪೋಷಕರಲ್ಲಿ ಅರಿವು ಮೂಡಿಸಿದರು. `ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ' ಎಂಬ ಘೋಷಣೆ ಕೂಗಿ ಪೋಷಕರ ಹಾಗೂ ಸಾರ್ವಜನಿಕರ ಗಮನ ಸೆಳೆದರು.ಶಾಲಾ ಮುಖ್ಯಶಿಕ್ಷಕ ಸಣ್ಣಸ್ವಾಮಿ ಮಾತನಾಡಿ, ಸರ್ಕಾರವು ಸರ್ಕಾರಿ ಶಾಲೆಗಳ ಮೂಲಕ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಲು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry