`ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಅವಶ್ಯ'
ಹನುಮಸಾಗರ: ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಅವಶ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶರಣಪ್ಪ ಗುಳಗೌಡ್ರ ಹೇಳಿದರು.
ಗುರುವಾರ ಸಮೀಪದ ಚಳಗೇರಾ ಗ್ರಾಮದ ರುದ್ರಮುನಿ ಶಿವಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಜರುಗಿದ 2013-2014ನೇ ಸಾಲಿನ ಗ್ರಾಮ ಪಂಚಾಯಿತಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠವನ್ನು ಕಲಿಯುವಂತೆಯೆ ಆಸಕ್ತಿಯಿಂದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಅಂದಾಗ ಮಾತ್ರ ಮಾನಸಿಕ ಮತ್ತು ದೈಹಿಕವಾಗಿ ಸದೃಢತೆಯಿಂದಿರಲು ಸಾಧ್ಯ ಎಂದರು.
ಸಂಸ್ಥೆಯ ಆಡಳಿತಾಧಿಕಾರಿ ಜಿ.ಎಸ್. ಹಿರೇಮಠ ಮಾತನಾಡಿ ಕ್ರೀಡೆಗಳಿಂದ ಕೇವಲ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಸೇರಿದಂತೆ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಯಾಗುತ್ತದೆ ಎಂದರು.
ಸಮೂಹ ಸಂಪನ್ಮೂಲ ವ್ಯಕ್ತಿ ದಾವಲಸಾಬ ಎಸ್.ಮುಲ್ಲಾ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಶರಣಪ್ಪ ಮಲಕಾಪುರ ಗುಂಡು ಎಸೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಚಳಗೇರಿ ಬ್ರಹನ್ಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ವಿರೂಪಾಕ್ಷಲಿಂಗಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.
ಮುಖ್ಯ ಶಿಕ್ಷಕ ಸಿದ್ರಾಮಯ್ಯ ಸಾಲಿಮಠ, ಗುಂಡಪ್ಪ ಗಣಿಕಿ, ಸಂಗನಗೌಡ ಮಾಲಿಪಾಟೀಲ, ಬಸವರಾಜ ಅಂಗಡಿ, ಮೊಸಪ್ಪ ಕೊಟಿ, ರಾಜಪ್ಪ ಹುಜರತ್ತಿ, ಐ.ಟಿಐ. ಕಾಲೇಜನ ಪ್ರಾಚಾರ್ಯ ರಾಜಕುಮಾರ ನಾಯಕ ಇತರರು ಇದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ಪ ಕ್ರೀಡಾಪಟುಗಳ ಪಥಸಂಚಲನ ನಡೆಸಿಕೊಟ್ಟರು. ಶಿವಪ್ಪ ಕಮ್ಮಾರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಪ್ರಭು ಬಿಜಕಲ್ ಸ್ವಾಗತಿಸಿದರು. ಮತ್ತಣ್ಣ ಜಾಲಿ ಕಾರ್ಯಕ್ರಮ ನಿರೂಪಿಸಿದರು, ವಿದ್ಯಾಧರ ಸೊಪ್ಪಿಮಠ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.