ಮಂಗಳವಾರ, ಮೇ 11, 2021
27 °C

`ಮಕ್ಕಳ ಪ್ರಗತಿಗೆ ಶಿಕ್ಷಣ ಅಗತ್ಯ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ: `ಮಕ್ಕಳ ಪ್ರಗತಿಗೆ ಶಿಕ್ಷಣ ಅಗತ್ಯ' ಎಂದು ಸಿವಿಲ್ ಮತ್ತು ನ್ಯಾಯಾಧೀಶೆ ವಿಮಲಾ ಆರ್.ನಂದಗಾಂವ ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಸ್ಥಳೀಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.`ಮಕ್ಕಳು ಗಿಡದಂತೆ. ಗಿಡಗಳಿಗೆ ಒಳ್ಳೆಯ ಪೋಷಣೆ ನೀಡಿದರೆ ಅವುಗಳು ಉತ್ತಮ ಫಲ ನೀಡುವಂತೆ ಮಕ್ಕಳಿಗೆ  ಒಳ್ಳೆಯ ಶಿಕ್ಷಣ ನೀಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ' ಎಂದರು.`ಮಕ್ಕಳು  ತಮಗೆ ಸಿಕ್ಕುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಎಲ್ಲ ಮಕ್ಕಳಿಗೂ ಎಲ್ಲ ಸೌಲಭ್ಯಗಳು ದೊರೆಯುವುದಿಲ್ಲ. ಮೈಮೇಲೆ ಸರಿಯಾಗಿ ಬಟ್ಟೆ ಕೂಡ ಇಲ್ಲದೇ ಭಿಕ್ಷೆ ಬೇಡುವ ಮಕ್ಕಳನ್ನು ನಾವು ನೋಡುತ್ತೇವೆ. ಈ ರೀತಿಯ ಪರಿಸ್ಥಿತಿ ದೂರವಾಗಬೇಕು ಎಂಬ ದೃಷ್ಟಿಯಿಂದಲೇ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ' ಎಂದರು.`ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಮಕ್ಕಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಮಹಾಪುರುಷರ ಜೀವನ ಚರಿತ್ರೆಯನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು' ಎಂದರು.ಬಿಇಒ ಬಿ.ವಿ.ನಾಯ್ಕ, ತಾ.ಪಂ.ಯೋಜನಾಧಿಕಾರಿ ವಿ.ಎಂ.ಹೆಗಡೆ ಉಪಸ್ಥಿತರಿದ್ದರು. ತಹಶೀಲ್ದಾರ್ ವಿ.ಕೆ.ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸ: ವಕೀಲ ಎಸ್.ಜಿ.ಹೆಗಡೆ ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾನೂನು ಕುರಿತು ಉಪನ್ಯಾಸ ನೀಡಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಜಿ.ಹೆಗಡೆ ಸ್ವಾಗತಿಸಿದರು.ಎನ್.ಆರ್.ಹೆಗಡೆಕರ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.