ಬುಧವಾರ, ಜೂನ್ 16, 2021
22 °C

ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿ: ದಿಲೀಪ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಮಕ್ಕಳಲ್ಲಿ ಹುದುಗಿರುವ ಕಲೆ ಹಾಗೂ ಪ್ರತಿಭೆಯನ್ನು ಹೊರ ಜಗತ್ತಿಗೆ ಪ್ರಚುರಪಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ದಿಲೀಪ್ ಹೇಳಿದರು.ನಗರದ ಜಿಲ್ಲಾ ರಂಗಮಂದಿರದಲ್ಲಿ ಕಲ್ಪನಾ ರಶ್ಮಿ ಕಲಾಲೋಕ ನೃತ್ಯ ಶಾಲೆ ಹಾಗೂ ನೆಹರು ಯುವ ಕೇಂದ್ರ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಕಲಾ ಮೇಳ– 2014 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಲ್ಪನಾ ರಶ್ಮಿ ಕಲಾಲೋಕ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಕಲಿಯುತ್ತಿರುವುದು ಸಂತಸದ ಸಂಗತಿಯಾಗಿದೆ. ಇಂದು ಒಂದು ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಸುವುದು ಸುಲಭದ ಮಾತಲ್ಲ. ಈ ನಿಟ್ಟಿನಲ್ಲಿ ಕಲ್ಪನಾ ರಶ್ಮಿ ಕಲಾಲೋಕದ ರೂವಾರಿ ಹಾಗೂ ಮುಖ್ಯ ಶಿಕ್ಷಕರಾಗಿ ಸೂರ್ಯಪ್ರಕಾಶ ಅವರು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣಪತಿ ಭಟ್ಟ ಅವರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರೇವಣ ಸಿದ್ದಪ್ಪ, ನಗರಸಭೆ ಅಧ್ಯಕ್ಷೆ ಲೀಲಾಬಾಯಿ ಠಾಣೇಕರ, ಯುವಜನ ಸೇವಾ ಸಮಿತಿಯ ಮೀರಾ ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ್ ಹೂಗಾರ, ನಗರಸಭೆ ಮಾಜಿ ಸದಸ್ಯ ಗಿರೀಶ್ ರಾವ್ ಮತ್ತಿತರರು ಹಾಜರಿದ್ದರು.ಸಭಾ ಕಾರ್ಯಕ್ರಮದ ಬಳಿಕ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.