ಭಾನುವಾರ, ಜೂನ್ 20, 2021
20 °C

ಮಕ್ಕಳ ಪ್ರಬುದ್ಧತೆಗೆ ಸಾಂಸ್ಕೃತಿಕ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಕ್ಕಳ ಪ್ರಬುದ್ಧತೆಗೆ ಸಾಂಸ್ಕೃತಿಕ ಸ್ಪರ್ಧೆ

 ಶಿವಮೊಗ್ಗ: ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ, ಪ್ರಬುದ್ಧರನ್ನಾಗಿಸಲು ಸಾಂಸ್ಕೃತಿಕ ಸ್ಪರ್ಧೆಗಳು ಸಹಾಯಕವಾಗಿವೆ ಎಂದು ನಗರಸಭೆ ಉಪಾಧ್ಯಕ್ಷ ರಮೇಶ್ (ರಾಮು) ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸ್ಪರ್ಧೆಗಳ `ಮಕ್ಕಳ ಹಬ್ಬ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಂದು ಮಗುವಿನಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ. ಅಂತಹ ಮಕ್ಕಳನ್ನು ಗುರುತಿಸಿ, ಶಿಕ್ಷಕರು ಮತ್ತು ಪೋಷಕರು ಸಕಾಲಿಕವಾಗಿ ಸಹಕರಿಸುವುದರ ಜತೆಗೆ ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕು ಎಂದರು.ಪ್ರಸಕ್ತ ಸಾಲಿನಿಂದ ನಗರದಲ್ಲಿ ಪಿಯುಸಿ ನಂತರದ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸಲು ನಗರಸಭೆ ಮಹತ್ವದ ನಿರ್ಣಯ ಕೈಗೊಂಡಿದೆ. ಸಹಾಯಧನ ಪಡೆಯಲಿಚ್ಫಿಸುವ ಬಡ ವಿದ್ಯಾರ್ಥಿಗಳು ನಗರಸಭೆಗೆ ಅರ್ಜಿ ಸಲ್ಲಿಸುವಂತೆ ಅವರು ತಿಳಿಸಿದರು.ಸಮಾರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಹ ನಿರ್ದೇಶಕ ಎಸ್.ಎಲ್. ಚವಾಣ್ ಮಾತನಾಡಿ, ಮಕ್ಕಳ ಪ್ರತಿಭೆ ಅನಾವರಣಕ್ಕೆ ಇಲಾಖೆಯು ಸತತ ಏಳು ವರ್ಷಗಳಿಂದ ವಿವಿಧ ಹಂತದಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡೆಸುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಸದಸ್ಯ ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಎಸ್. ಪರಮಶಿವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮೀಕಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಕಮಲಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಬಸವರಾಜಪ್ಪ, ವಿಷಯ ಪರಿವೀಕ್ಷಕ ಭೀಮನಗೌಡ್ರು, ಶಿಕ್ಷಣ ಸಂಯೋಜಕ ಜಿ.ಎಸ್. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.ಸ್ಪರ್ಧೆಗಳಲ್ಲಿ ಜಿಲ್ಲೆಯ ವಿವಿಧ ಶಾಲಾ ವಿದ್ಯಾರ್ಥಿಗಳ 23 ಕಲಾ ತಂಡಗಳು ಭಾಗವಹಿಸಿದ್ದವು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.