ಮಕ್ಕಳ ಮೇಲೆ ಒತ್ತಡ ಸಲ್ಲ

7

ಮಕ್ಕಳ ಮೇಲೆ ಒತ್ತಡ ಸಲ್ಲ

Published:
Updated:

ಚಾಮರಾಜನಗರ: `ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಜತೆಗೆ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಿಕೊಡಬೇಕು~ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಬಿ. ಲೋಚನಾ ಸಲಹೆ ನೀಡಿದರು.ನಗರದ ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ಗುರುವಾರ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಕ್ಕಳೊಂದಿಗೆ ಸಂವಾದ ಹಾಗೂ ಪಾಲಕರ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಮೇಲೆ ಅನಗತ್ಯವಾಗಿ ಒತ್ತಡ ಹೇರಬಾರದು. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಶೈಕ್ಷಣಿಕಮಟ್ಟ  ಸುಧಾರಣೆಯಾಗಲಿದೆ. ಜತೆಗೆ, ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಲಿದೆ ಎಂದ ಅವರು, ಮಕ್ಕಳೊಂದಿಗೆ ಪೋಷಕರು ಕಠೋರವಾಗಿ ವರ್ತಿಸಬಾರದು. ವಿದ್ಯಾರ್ಥಿಗಳು ಕೂಡ ಕಲಿಕೆಯಲ್ಲಿ ಹಿಂದುಳಿಯದೆ ಉತ್ತಮ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ದಿವಾಕರ್ ಮಾತನಾಡಿ, ಪ್ರತಿ ಮಗುವಿನಲ್ಲೂ ಪ್ರತಿಭೆ ಇರುತ್ತದೆ. ಮಕ್ಕಳ ಮೇಲೆ ಅತಿಯಾದ ಒತ್ತಡ ಹೇರಿದರೆ ಅವರ ಓದಿನ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ. ಮಕ್ಕಳು ಮೊಬೈಲ್, ಟಿವಿಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶೇಹೆರ್‌ಬಾನು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಎಚ್.ಕೆ. ರೇವಣೇಶ್, ಬಾಲವಿಕಾಸ ಅಕಾಡೆಮಿ ಸದಸ್ಯೆ ಪದ್ಮಾ ಪುರುಷೋತ್ತಮ್, ಎಸ್.ಪಿ. ನಾಗರಾಜು, ಸಂಪನ್ಮೂಲ ವ್ಯಕ್ತಿಗಳಾದ ಸಿ.ಆರ್. ಬಾಲರಪಟ್ಟಣ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯ ಬಿ. ಸುಜಯಕುಮಾರ್, ನಾಗೇಶ್‌ಸೋಸ್ಲೆ, ಎನ್. ಮಹೇಶ್ ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry