ಶನಿವಾರ, ಅಕ್ಟೋಬರ್ 19, 2019
28 °C

ಮಕ್ಕಳ ಶೈಕ್ಷಣಿಕ ಪ್ರಗತಿ: ಪೋಷಕರಿಗೆ ಸಲಹೆ

Published:
Updated:

ದೇವನಹಳ್ಳಿ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಗಮನವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಬಚ್ಚೇಗೌಡ ಸಲಹೆ ನೀಡಿದರು.ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ಸಂಜೆ ಸ್ಟಲಿರ್ಂಗ್ ಶಾಲೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಎಂಬ ತಾರತಮ್ಯ ಮುಖ್ಯವಾಗಬಾರದು. ಇಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಫಲಿತಾಂಶದಲ್ಲಿ ಮುಂಚೂಣಿಯಲ್ಲಿವೆ. ಆದರೆ ಕಳೆದ 5ವರ್ಷದ ಫಲಿತಾಂಶ ಗಮನಿಸಿದರೆ ಸರ್ಕಾರಿ ಶಾಲೆಯಲ್ಲಿಯೂ ಗುಣಮಟ್ಟದ ಫಲಿತಾಂಶ ಬರುತ್ತಿದೆ ಎಂದರು.ಸಮಾರಂಭ ಉದ್ಘಾಟಿಸಿದ ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರಿನಿವಾಸ್,  ಜ್ಞಾನಾರ್ಜನೆ ಮತ್ತು ಉನ್ನತ ವ್ಯಾಸಂಗಕ್ಕೆ ಆಂಗ್ಲ ಭಾಷೆ ಅಗತ್ಯ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುವವರೆಲ್ಲ ಶ್ರೀಮಂತರ ಮಕ್ಕಳಲ್ಲ ಎಂದರು.ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್ ಮಾತನಾಡಿದರು. ಭೈರವೇಶ್ವರ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಕೆ.ಬಿ.ಅಶೋಕ್ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಎಸ್. ಸಿ.ಘಟಕ ಅಧ್ಯಕ್ಷ ಚಿನ್ನಪ್ಪ,  ಶಾಲಾ ಆಡಳಿತ ಮಂಡಳಿ ಮುಖ್ಯಸ್ಥೆ ಶಶಿಕಲಾ ಅಶೋಕ್, ನಿರ್ದೇಶಕ ಡಾ.ಕೆ.ಬಿ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕ ಪ್ರಶಾಂತ್ ಶಾಲಾ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ರತ್ನಮ್ಮ ರವಿಕುಮಾರ್ ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಮಾಜಿ ಸದಸ್ಯ ಎಸ್.ಲಕ್ಷ್ಮಿನಾರಾಯಣ ಅವರನ್ನು ಸನ್ಮಾನಿಸಲಾಯಿತು.

Post Comments (+)