ಸೋಮವಾರ, ಜೂನ್ 14, 2021
22 °C

ಮಕ್ಕಳ ಸೃಜನಶೀಲತೆ ಪ್ರೋತ್ಸಾಹ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಕ್ಕಳ ಸೃಜನಶೀಲತೆ ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ಟಿ. ಶೈಲಜಾ ಭಟ್ ತಿಳಿಸಿದರು.ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲವಿಕಾಸ ಅಕಾಡೆಮಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಧಾರವಾಡದ ಬಾಲವಿಕಾಸ ಅಕಾಡೆಮಿ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಶುಕ್ರವಾರ ನಡೆದ ~ಮಕ್ಕಳ ಹಬ್ಬ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರಿಯಾಶೀಲತೆಗೆ ಹೆಚ್ಚಿನ ಒತ್ತು ನೀಡುವ ಕೆಲಸ ಆಗಬೇಕು. ಮಕ್ಕಳ ಸೃಜನಶೀಲತೆಗೆ ಪ್ರೋತ್ಸಾಹ ಅಗತ್ಯ. ವ್ಯಕ್ತಿತ್ವ ವಿಕಸನಕ್ಕೆ ಶಿಸ್ತು, ಓದುವ ಹವ್ಯಾಸ, ಪ್ರೇರಣೆ ಅಗತ್ಯ ಎಂದು ಅವರು ಪ್ರತಿಪಾದಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್.ವಿಜಯ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಜನಾರ್ದನ ಗೌಡ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಆಶಾ ನಾಯಕ್, ಬಾಲವಿಕಾಸ ಜಿಲ್ಲಾ ಕಾರ್ಯನುಷ್ಠಾನ ಸಮಿತಿ ಸದಸ್ಯ ಮೌನೇಶ್ ವಿಶ್ವಕರ್ಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶಕುಂತಲಾ, ಜಿಲ್ಲಾ ನಿರೂಪಣಾಧಿಕಾರಿ ಸುಂದರ ಪೂಜಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೊಸೆಸ್ ಜಯಶೇಖರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.