ಹಾಸನ: ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಲಗಾಮೆ ಗ್ರಾಮ ಪಂಚಾಯಿತಿಗಳ ಸಹಯೊಗದಲ್ಲಿ ಮಂಗಳವಾರ ಸಾಲಗಾಮೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ ಆಯೋಜಿಸಲಾಯಿತು.

ಸಭೆಯಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕ ಮಕ್ಕಳ ರಕ್ಷಣಾಧಿಕಾರಿ ವಿ. ಗೀತಾ, `ಮಕ್ಕಳಿಗೆ ಜೀವಿಸುವ, ವಿಕಾಸ ಹೊಂದುವ, ಭಾಗವಹಿಸುವ ಮತ್ತು ರಕ್ಷಣೆಯ ಹಕ್ಕು ನೀಡಲಾಗಿದೆ. ದೊಡ್ಡವರು ಅವರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು~ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಧುರಾ, `ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವ ಸಲುವಾಗಿ ಮಕ್ಕಳ ಗ್ರಾಮಭೆ ಏರ್ಪಡಿಸಲಾಗಿದೆ. ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸಭೆಯ ಉದ್ದೇಶ~ ಎಂದರು.

ಮುಖ್ಯ ಅತಿಥಿಯಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಹೆಚ್.ಸಿ ಚಿದಾನಂದ, `ಭಾರತ ವಿಶ್ವ ಸಂಸ್ಥೆಯ ಜತೆ ಮಾಡಿಕೊಂಡಿರುವ ಒಡಂಬಡಿಕೆ ಪ್ರಕಾರ ತಾಯಿಯ ಹೊಟ್ಟೆಯಲ್ಲಿರುವಾಗಲೇ ಮಕ್ಕಳಿಗೆ ಹಕ್ಕುಗಳು ಸಿಗುತ್ತವೆ.

ನಿಯಮಿತ ಆರೋಗ್ಯ ತಪಾಸಣೆ ಆಗಬೇಕು, ಹೆರಿಗೆ ಆಸ್ಪತ್ರೆಯಲ್ಲೇ ಆಗಬೇಕು. ಇದರಿಂದ ತಾಯಿ ಮತ್ತು ಮಗುವಿನ ಸಾವಿನ ಸಂಖ್ಯೆ ಕಡಿಮೆಯಾಗುತ್ತದೆ. ತಾಯಿ ಪ್ರತಿ ಮಗುವಿಗೆ ಹುಟ್ಟಿದ ತಕ್ಷಣ ಎದೆ ಹಾಲನ್ನು ಕುಡಿಸಬೇಕು, ಅಲ್ಲದೆ ಮಕ್ಕಳಿಗೆ ಕಡ್ಡಾಯವಾಗಿ ರೋಗ ನಿರೋಧಕ ಚುಚ್ಚು ಮದ್ದು ಹಾಗೂ ಪೌಷ್ಠಿಕ ಆಹಾರ ಕೊಡಬೇಕು~ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಇ.ಸಿ.ಒ ನಂಜುಂಡೇಗೌಡ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಶಾರದಮ್ಮ ಪಾಲ್ಗೊಂಡಿದ್ದರು. ಗ್ರಾಮ ಪಂಚಾಯತಿ ಅಧ್ಯಕ್ಷ ಸತ್ಯಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ರಕ್ಷಣಾಧಿಕಾರಿ ಕಾಂತರಾಜು ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಮೇಶ್ ಸ್ವಾಗತಿಸಿದರು. ಸಂತೋಷ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.