ಮಂಗಳವಾರ, ಜೂನ್ 22, 2021
22 °C

ಮಕ್ಕಳ ಹಸ್ತಾಂತರ ಪ್ರಕರಣ: ನಾರ್ವೆಗೆ ಭಾರತೀಯ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್) :  ನಾರ್ವೆಯ ಮಕ್ಕಳ ಕಲ್ಯಾಣ ಸೇವಾ ವಿಭಾಗದಲ್ಲಿರುವ ಅನಿವಾಸಿ ಭಾರತೀಯರ ಇಬ್ಬರು ಮಕ್ಕಳನ್ನು ಪೋಷಕರಿಗೆ ಹಸ್ತಾಂತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಭಾರತದ ಇಬ್ಬರು ಹಿರಿಯ ಅಧಿಕಾರಿಗಳು ನಾರ್ವೆಗೆ ಪ್ರಯಾಣ ಬೆಳೆಸಲಿದ್ದಾರೆ.ಕಾನೂನು ತಜ್ಞರು ಮತ್ತು ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳ ತಂಡ ಈ ವಾರದ ಕೊನೆಯಲ್ಲಿ ನಾರ್ವೆಗೆ ಹೊರಡಲಿದೆ ಎಂದು ಮೂಲಗಳು ತಿಳಿಸಿವೆ.  ಮಕ್ಕಳನ್ನು ಪೋಷಕರಿಗೆ ಹಿಂದಿರುಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಅಧಿಕಾರಿಗಳ ತಂಡ 23ರಂದು ಅಲ್ಲಿನ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆಯಲ್ಲಿ ಹಾಜರಾಗುವಂತೆ ವಿದೇಶಾಂಗ ಸಚಿವಾಲಯ ಸೂಚಿಸಿದೆ.ಈ ನಡುವೆ ಮಕ್ಕಳನ್ನು ಪೋಷಕರಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಶೀಘ್ರಗೊಳಿಸುವಂತೆ ನಾರ್ವೆ ಅಧಿಕಾರಿಗಳ ಜೊತೆ ಚರ್ಚಿಸಲು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಮಧುಸೂದನ್ ಗಣಪತಿಯವರನ್ನು ನಾರ್ವೆಗೆ ಕಳುಹಿಸಲಾಗಿತ್ತು. ಅವರು ವಾಪಸಾದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.