ಮಗಳಿಗೆ ಮದ್ಯ ಕುಡಿಸಿ ಅತ್ಯಾಚಾರ

7

ಮಗಳಿಗೆ ಮದ್ಯ ಕುಡಿಸಿ ಅತ್ಯಾಚಾರ

Published:
Updated:

ಕೊಚ್ಚಿ (ಪಿಟಿಐ): ತಂದೆಯೇ ಮಗಳಿಗೆ ಮದ್ಯ ಕುಡಿಸಿ ಬಳಿಕ ಅತ್ಯಾಚಾರ ನಡೆಸುತ್ತಿದ್ದ ಅಮಾನವೀಯ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಕುರುಂಪಾಡಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಕಳೆದ ಆರು ತಿಂಗಳಿಂದ ಸತತವಾಗಿ ಮಗಳ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ ವಿರುದ್ಧ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಮತ್ತು ಅಪ್ರಾಪ್ತರಿಗೆ ಮದ್ಯ ಕುಡಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷೆನ್ 328ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ ದೂರು ನೀಡಿದ್ದರು. ಇದನ್ನು ತಿಳಿದು ಬಾಲಕಿಯ ತಂದೆ ತಲೆಮರೆಸಿಕೊಂಡಿದ್ದಾನೆ.ಪ್ರತಿದಿನ ಲೈಂಗಿಕ ಕಿರುಕುಳ ನಡೆಸುವ ಮುನ್ನ ತಂದೆ ಮದ್ಯ ನೀಡುತ್ತಿದ್ದರು. ತಂದೆಯ ಐದಾರು ಜನ ಮಿತ್ರರು ಕೂಡ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿ ವಿವರಿಸಿದ್ದಾಳೆ ಎಂದು ಈಕೆಗೆ ಚಿಕಿತ್ಸೆ ನೀಡುತ್ತಿರುವ ಅಳುವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮನೋವೈದ್ಯ ಅಜೀಶ್ ರಾಮಚಂದ್ರನ್ ತಿಳಿಸಿದ್ದಾರೆ.ಘಟನೆ ಬಳಿಕ ಬಾಲಕಿಯ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು. ಸ್ಥಳೀಯ ವೈದ್ಯರು ಮತ್ತು ಮನೋವೈದ್ಯರ ಬಳಿ ತಂದಾಗ, ಆಪ್ತ ಸಮಾಲೋಚನೆ ನಡೆಸಿದ ನಂತರ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನು ತಿಳಿದ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.ವರ್ಷದ ಹಿಂದೆ ಬಾಲಕಿಯ ಪೋಷಕರು ಪ್ರತ್ಯೇಕ ಸ್ಥಳಗಳಲ್ಲಿ ವಾಸಿಸುತ್ತಿದ್ದರು. ಬಾಲಕಿಯ ತಾಯಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದರು. ಇಬ್ಬರು ಮಕ್ಕಳಲ್ಲಿ ಒಬ್ಬಳನ್ನು ಕರೆದುಕೊಂಡು ಹೋಗುವಂತೆ ಬಾಲಕಿಯ ತಾಯಿ ಪತಿಗೆ ಹೇಳಿದ್ದರು. ಆರು ವರ್ಷದ ಒಬ್ಬಳು ಮಗಳನ್ನು ತಂದೆ ಕರೆದುಕೊಂಡು ಹೋಗಿ ಸತತವಾಗಿ ಮದ್ಯ ಕುಡಿಸಿ ಅತ್ಯಾಚಾರ ಮಾಡಿದ್ದಾನೆ.ಕೇರಳದ ಕೊಟ್ಟಾಯಂ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇತ್ತೀಚಿಗೆ ಇಂತಹುದೇ ಘಟನೆ ವರದಿಯಾಗಿದ್ದವು. ಕೊಟ್ಟಾಯಂನಲ್ಲಿ ತಂದೆಯೊಬ್ಬ 13 ಮತ್ತು 15 ವರ್ಷದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಎರಡು ವರ್ಷಗಳಿಂದ ಸತತವಾಗಿ ಅತ್ಯಾಚಾರ ನಡೆಸಿದ್ದ. ಕಣ್ಣೂರಿನ ಧರ್ಮದಾಮದಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ತಂದೆ, ಚಿಕ್ಕಪ್ಪ ಮತ್ತು ಬಾಲಕಿಯ ಸಹೋದರನನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry