ಮಜಗೆ ಅವರ ಹೆಗಲಿಗೆ ಲೋಕಾಯುಕ್ತ ಹೊಣೆ

ಸೋಮವಾರ, ಮೇ 27, 2019
33 °C

ಮಜಗೆ ಅವರ ಹೆಗಲಿಗೆ ಲೋಕಾಯುಕ್ತ ಹೊಣೆ

Published:
Updated:

ಬೆಂಗಳೂರು: ನ್ಯಾಯಮೂರ್ತಿ ಶಿವರಾಜ್ ಪಾಟಿಲ್ ಅವರು ಲೋಕಾಯುಕ್ತ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಮಂಗಳವಾರ ಅಂಗೀಕರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಒಂದನೇ ಉಪ ಲೋಕಾಯುಕ್ತ ನ್ಯಾಯಮೂರ್ತಿ ಎಸ್.ಬಿ.ಮಜಗೆ ಅವರು ಉಸ್ತುವಾರಿ ಲೋಕಾಯುಕ್ತರಾಗಿ ಕೆಲಸ ನಿರ್ವಹಿಸಲಿದ್ದಾರೆ. ಕಾಯಂ ಲೋಕಾಯುಕ್ತರ ನೇಮಕದವರೆಗೂ ಇವರೇ ಉಸ್ತುವಾರಿ ಲೋಕಾಯುಕ್ತ ಹುದ್ದೆಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ.ನಿವೇಶನ ಪ್ರಕರಣ ಹಿನ್ನೆಲೆಯಲ್ಲಿ ಶಿವರಾಜ್ ಪಾಟೀಲ್ ಅವರು ಸೋಮವಾರ ಸಂಜೆ ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಮಂಗಳವಾರ ಮಧ್ಯಾಹ್ನ ಅಂಗೀಕರಿಸಿ, ಹೊಸ ಲೋಕಾಯುಕ್ತರ ನೇಮಕಕ್ಕೆ ಹಸಿರು ನಿಶಾನೆಯನ್ನು ತೋರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry