ಗುರುವಾರ , ಜೂನ್ 24, 2021
23 °C
ಇಬ್ರಾಹಿಂ ಯೋಜನಾ ಮಂಡಳಿ ಉಪಾಧ್ಯಕ್ಷ?

ಮಠಗಳಿಗೆ ಹಣ: ಈಗ ಕಾಂಗ್ರೆಸ್ ಸರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಒಟ್ಟು 170 ಮಠಗಳು ಮತ್ತು ಜಾತಿ ಜನಾಂಗ­ಗಳ ಸಂಘ ಸಂಸ್ಥೆಗಳಿಗೆ ₨ 66 ಕೋಟಿ ಬಿಡುಗಡೆ ಮಾಡಿದೆ.



ಮಠಗಳಿಗೆ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2013–14ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸಿದ್ದರು. ಈಗ ಅವುಗಳ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಆಯಾ ಮಠಗಳು ಹಾಗೂ ಜನಾಂಗ­ಗಳ ಸಂಘ­ಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳಿಗಾಗಿ ಈ ಹಣ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಇಬ್ರಾಹಿಂ?: ಸಿದ್ದರಾಮಯ್ಯ ಅವರ ಆಪ್ತರಾದ ಸಿ.ಎಂ.­ಇಬ್ರಾಹಿಂ ಅವ­ರನ್ನು ರಾಜ್ಯ ಯೋಜನಾ ಮಂಡಳಿ ಉಪಾ­ಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆ ಇದೆ.ಈ ಸಂಬಂಧ ಅವರು ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯ್‌ಸಿಂಗ್‌ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದು, ವರಿಷ್ಠರ ಒಪ್ಪಿಗೆ ಸಿಕ್ಕ ನಂತರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಗೊತ್ತಾಗಿದೆ.



ನೇಮಕ: ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರನ್ನು ದೆಹಲಿಯ ವಿಶೇಷ ಪ್ರತಿನಿಧಿ ಸ್ಥಾನಕ್ಕೆ ನೇಮಿಸಲು ತೀರ್ಮಾನಿಸಲಾಗಿದೆ. ಇಬ್ಬಾಹಿಂ ಮತ್ತು ಅಪ್ಪಾಜಿಗೌಡರ ನೇಮಕಕ್ಕೆ ಹೈಕಮಾಂಡ್‌ ಒಪ್ಪಿಗೆ ಸಿಕ್ಕ ನಂತರ ಚುನಾವಣಾ ಆಯೋಗದ ಒಪ್ಪಿಗೆ ಪಡೆದು ಸರ್ಕಾರಿ ಆದೇಶ ಹೊರಡಿಸುವ ಸಾಧ್ಯತೆ ಇದೆ.



ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್‌ ಜಬ್ಬಾರ್‌ ಅವರನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅವರ ಹಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದು, ಆಯೋಗದ ಅನುಮತಿ ಸಿಕ್ಕ ನಂತರವೇ ಈ ಸಂಬಂಧದ ಆದೇಶ ಕೂಡ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.