ಭಾನುವಾರ, ಜೂನ್ 13, 2021
22 °C

ಮಡೆಸ್ನಾನ ವಿರೋಧಿಸಿ 26ರಂದು ಧರಣಿ- ದ್ವಾರಕಾನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮಡೆಸ್ನಾನ ಮತ್ತು ಪಂಕ್ತಿಭೇದವನ್ನು ವಿರೋಧಿಸಿ ಮಾರ್ಚ್ 26ರ ಸೋಮವಾರದಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯಮಟ್ಟದ ಬೃಹತ್ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಹೇಳಿದರು.ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇತ್ತೀಚಿನ ದಿನಗಳಲ್ಲಿ ಮಡೆಸ್ನಾನ ಮತ್ತು ಪಂಕ್ತಿಭೇದ ವಿರುದ್ಧ  ಕಳೆದ ನಾಲ್ಕು ತಿಂಗಳಿಂದ ನಿಡುಮಾಮಿಡಿ ಸಂಸ್ಥಾನಮಠ  ನಿರಂತರವಾಗಿ  ಧರಣಿ, ಸಭೆ, ಸಂವಾದಗಳನ್ನ ಹಮ್ಮಿಕೊಳ್ಳುವ ಮೂಲಕ ಸರ್ಕಾರವನ್ನು ಒತ್ತಾಯಿಸಿದರೂ, ಸರ್ಕಾರ  ಮಡೆಸ್ನಾನ ನಿಷೇಧಿಸುವ ಕುರಿತು ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಸರ್ಕಾರದ ಈ ಕ್ರಮವನ್ನು ವಿರೋಧಿಸಿ  136 ಮಠಾಧೀಶರುಗಳು, 19 ಮಹಿಳಾ ಗುರುಗಳು,  ಪ್ರಗತಿಪರ ಚಿಂತಕರು ಮತ್ತು ಎಲ್ಲ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ~ ಎಂದು ಅವರು ತಿಳಿಸಿದರು.ಮಾಜಿ ಸಚಿವೆ ಡಾ.ಬಿ.ಟಿ.ಲಲಿತಾ ನಾಯಕ್ ಮಾತನಾಡಿ, `ಜಾತಿ, ಮತ, ಪಂಥ ಹಾಗೂ ಪ್ರಾದೇಶಿಕ ಭೇದವಿಲ್ಲದೆ ಇಷ್ಟು ಸಂಖ್ಯೆಯಲ್ಲಿ ಧಾರ್ಮಿಕ ಮುಖಂಡರು ಒಂದೆಡೆ ಸೇರಿ ಮಡೆಸ್ನಾನ ಮತ್ತು ಪಂಕ್ತಿಭೇಧ ಹಾಗೂ ಇನ್ನಿತರ ಮೂಢನಂಬಿಕೆಗಳನ್ನು ನಿಷೇಧಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.