ಮಂಗಳವಾರ, ಜೂನ್ 15, 2021
26 °C

ಮಡೆಸ್ನಾನ ವಿರೋಧ: ಸಂಯುಕ್ತ ರಂಗ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಮಡೆಸ್ನಾನ, ಪಂಕ್ತಿಬೇಧ, ಅಸ್ಪೃಶ್ಯತೆ ಆಚರಣೆ, ದೌರ್ಜನ್ಯ ತಡೆಗಟ್ಟಬೇಕು ಎಂದು ಆಗ್ರಹಿಸಿ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗದ ಕಾರ್ಯಕರ್ತರು ಕೋಲಾರದಲ್ಲಿ ಸೋಮವಾರ ಮೆರವಣಿಗೆ ನಡೆಸಿದರು.ಬ್ರಾಹ್ಮಣರು ಊಟ ಮಾಡಿ ಬಿಟ್ಟ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡುವ ಪದ್ಧತಿಯನ್ನು, ಮಾನವರ ನಡುವೆ ಮೇಲು-ಕೀಳು ಭಾವವನ್ನು ಪ್ರಚೋದಿಸುವ ಪಂಕ್ತಿಭೇದವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.ಅಸ್ಪೃಶ್ಯತೆ ಆಚರಣೆ ನಿರ್ಮೂಲನೆ, ಬಾಲ್ಯ ವಿವಾಹ, ಮಲ ಹೊರುವ ಪದ್ಧತಿಯನ್ನು ನಿಷೇಧಿಸಬೇಕು.

ರಾಜ್ಯ ದಲ್ಲಿ ಹಲವೆಡೆ ಉದ್ದೇಶಪೂರ್ವಕವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳನ್ನು ಧ್ವಂಸ ಮಾಡಲಾಗುತ್ತಿದೆ.ಅಂಬೇಡ್ಕರ್ ಭಾವಚಿತ್ರವಿರುವ ಗೋಡೆಗಳನ್ನು ನಾಶ ಮಾಡಲಾಗುತ್ತಿದೆ. ಅಂಥ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.1998ರಲ್ಲೆ ಕ್ಲಾಕ್‌ಟವರ್‌ನಿಂದ ಗಾಂಧಿನಗರದವರೆಗಿನ ರಸ್ತೆಯನ್ನು ಅಂಬೇಡ್ಕರ್ ವೀಧಿ ಎಂದು ಹೆಸರಿಸ ಲಾಗಿದೆ. ಆದರೆ ಅದನ್ನು ಇದುವರೆಗೂ ನಗರಸಭೆ ಜಾರಿಗೊಳಿಸಲ್ಲ. ಬೇತಮಂಗಲದ ಕೂಳೂರು ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಬೆಂಕಿ ಇಟ್ಟವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ನಡೆದ ಮೆರವಣಿಗೆಯಲ್ಲಿ ನೂರಾರು ಕಾರ್ಯ ಕರ್ತರು ಪಾಲ್ಗೊಂಡಿದ್ದರು. ಡಾ.ಎಂ.ಚಂದ್ರಶೇಖರ್, ಆಟೋ ನಾರಾ ಯಣಸ್ವಾಮಿ, ಹಾರೋಹಳ್ಳಿ ನಾರಾ ಯಣಸ್ವಾಮಿ ನೇತೃತ್ವ ವಹಿಸಿದ್ದರು.ಕಾಯಮಾತಿಗೆ ಒತ್ತಾಯ


ಚಿಂತಾಮಣಿ: ಗ್ರಾಮ ಸಹಾಯಕರನ್ನು ಕಾಯಂಗೊಳಿಸಬೇಕು ಎಂದು ಸಫಾಯಿ ಆಯೋಗದ ಮಾಜಿ ಅಧ್ಯಕ್ಷ ಕೆ.ಎಂ.ಮುನಿಯಪ್ಪ ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.