ಶುಕ್ರವಾರ, ಮೇ 27, 2022
23 °C

ಮಣಿಪುರ ಸಚಿವರ ಮಗನಿಂದ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಫಾಲ (ಪಿಟಿಐ):ಮಣಿಪುರ ರಾಜ್ಯದ ಸಚಿವರೊಬ್ಬರ ಮಗ 21 ವರ್ಷದ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಈ ಘಟನೆಯ ಹಿನ್ನೆಲೆಯಲ್ಲಿ ನೀರಾವರಿ, ಆಹಾರ ನಿಯಂತ್ರಣ ಮತ್ತು ಕ್ರೀಡಾ ಖಾತೆ ಸಚಿವರಾದ ಎನ್. ಬಿರೇನ್ ಸಿಂಗ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಇರೋಮ್ ರೋಜರ್ ಎಂಬುವನೇ ಹತ್ಯೆಯಾದ ದುರ್ದೈವಿ. ಈತ  ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿನ ತನ್ನ ತವರೂರಿನಲ್ಲಿ ವೈಭವದಿಂದ ನಡೆಯುವ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ. ಈ ಘಟನೆಗೆ ವೈಯಕ್ತಿಕ ದ್ವೇಷ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.