ಬುಧವಾರ, ಅಕ್ಟೋಬರ್ 16, 2019
22 °C

ಮಣಿಪುರ: 266 ನಾಮಪತ್ರ

Published:
Updated:

ಇಂಫಾಲ (ಪಿಟಿಐ): ಮಣಿಪುರದಲ್ಲಿ 60 ಸದಸ್ಯರ ವಿಧಾನಸಭೆಗೆ ಈ ತಿಂಗಳ 28ರಂದು ಚುನಾವಣೆ ನಡೆಯಲಿದ್ದು 266 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ಆದರೆ ಬೆಟ್ಟಗುಡ್ಡ ಪ್ರದೇಶವಿರುವ ದೂರದ ಜಿಲ್ಲೆಗಳಿಂದ ವಿವರ ಬಂದ ನಂತರವೇ ಅಂತಿಮ ಚಿತ್ರಣ ಸಿಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಬುಧವಾರ ಕಡೆಯ ದಿನವಾಗಿತ್ತು. ನಾಮಪತ್ರ ಹಿಂದಕ್ಕೆ ಪಡೆಯಲು ಈ ತಿಂಗಳ 14 ಕಡೆಯ ದಿನ.

ಆಡಳಿತ ಕಾಂಗ್ರೆಸ್ ಪಕ್ಷವು ಎಲ್ಲಾ 60 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ಮತ್ತು ಬಹುತೇಕ ಸಚಿವರು ನಾಮಪತ್ರ ಸಲ್ಲಿಸಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ, ತೃಣಮೂಲ ಕಾಂಗ್ರೆಸ್, ಮಣಿಪುರ ರಾಜ್ಯ ಕಾಂಗ್ರೆಸ್ ಪಕ್ಷ ಮತ್ತಿತರ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ಹೇಳಿವೆ.

Post Comments (+)