ಮಂಗಳವಾರ, ಮಾರ್ಚ್ 2, 2021
31 °C

ಮತದಾನದಲ್ಲಿ ಪಾಲ್ಗೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮತದಾನದಲ್ಲಿ ಪಾಲ್ಗೊಳ್ಳಲು ಸಲಹೆ

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಪ್ರತಿಯೊಬ್ಬ ಮತದಾರನೂ ಹಿಂದಿನ ಚುನಾವಣೆಗಳಿಗಿಂತ 17ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಪಣತೊಟ್ಟಿರುವಂತೆ ಭಾಸವಾಗುತ್ತಿದೆ ಎಂದು ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಶಿವನಂಜೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಬುಧವಾರ ನಡೆದ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.ವಿದ್ಯಾರ್ಥಿಗಳು 5 ನಿಮಿಷಗಳ ಕಾಲ ಮಾನವ ಸರಪಳಿ ನಿರ್ಮಿಸಿ ಅರಿವು ಮೂಡಿಸಿದರು. ಜನರಿಗೆ ಕರಪತ್ರ ಹಂಚಲಾಯಿತು. ದೈಹಿಕ ಶಿಕ್ಷಣ ಸಂಯೋಜಕ ಕಲೀಮುಲ್ಲಾ ಖಾನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಡಿ.ಎನ್. ವಿಜಯ್‌ಕುಮಾರ್, ಇಒ ಲಿಂಗರಾಜು, ಸಿಡಿಪಿಒ ರಾಮಕೃಷ್ಣಯ್ಯ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.