ಶನಿವಾರ, ನವೆಂಬರ್ 23, 2019
18 °C

`ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ'

Published:
Updated:

ಗುಲ್ಬರ್ಗ: ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಯು 2013ರ ಮೇ 5 ರಂದು ಬೆಳಿಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಜರುಗಲಿದ್ದು, ಪ್ರಜಾಪ್ರಭುತ್ವದ ಬಲವರ್ಧನೆಗೆ ಜಿಲ್ಲೆಯ ಎಲ್ಲ ಮತದಾರರು ಸಂವಿಧಾನಾತ್ಮಕವಾಗಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಮತ್ತು ತಪ್ಪದೇ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಜಿ.ಜಗದೀಶ್ ಮನವಿ ಮಾಡಿದ್ದಾರೆ.ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹೊಂದಿದ್ದಲ್ಲಿ ಮಾತ್ರ ಮತದಾನದ ಹಕ್ಕು ಉದ್ಭವಿಸುವುದಿಲ್ಲ. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ವ್ಯಕ್ತಿಗಳ ಹೆಸರು ನೋಂದಣಿಯಾಗುವುದು ಸಹ ಅಷ್ಟೇ ಮುಖ್ಯ. ಮತದಾರರು ತಮ್ಮ ಮತ ಗೌಪ್ಯವಾಗಿರುವಂತೆ ನೋಡಿಕೊಳ್ಳಿ. ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ.

ಇನ್ನೊಬ್ಬರ ಹೆಸರಿನಲಿ ್ಲಮತದಾನ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಶಿಕ್ಷಾರ್ಹ. ಜಿಲ್ಲೆಯ ಸಮಸ್ತ ನಾಗರಿಕರು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು, ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲ ಅಭ್ಯರ್ಥಿಗಳು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಕೋರಿದ್ದಾರೆ.

ಪ್ರತಿಕ್ರಿಯಿಸಿ (+)