ಮಂಗಳವಾರ, ನವೆಂಬರ್ 12, 2019
28 °C

ಮತದಾನ ಜಾಗೃತಿ ಕಾರ್ಯಕ್ಕೆ ಚಾಲನೆ

Published:
Updated:

ನರಸಿಂಹರಾಜಪುರ: ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾ ವಣೆಯಲ್ಲಿ ಪಾಲ್ಗೂಳ್ಳುವಿಕೆ ಸಮಿತಿ (ಸ್ವೀಪ್) ವತಿಯಿಂದ ಸೋಮವಾರ  ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು.ಸ್ವೀಪ್ ಸಮಿತಿಯ ತಾಲ್ಲೂಕು ನೋಡಲ್ ಅಧಿಕಾರಿ ಜಿಲ್ಲಾ ಯುವಜನ ಮತ್ತು ಕ್ರೀಡಾಧಿಕಾರಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೌಸ್‌ಮೋಯಿದ್ದಿನ್,ಕಾರ್ಯ ದರ್ಶಿಮೋಗಣ್ಣಗೌಡ, ಮುಖ್ಯಾಧಿಕಾರಿ ನಾಗೇಂದ್ರ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಶಾಂತಪ್ಪ ಹಾಗೂ ತಾಲ್ಲೂಕಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿದ್ದರು.

ಪ್ರತಿಕ್ರಿಯಿಸಿ (+)