ಭಾನುವಾರ, ನವೆಂಬರ್ 17, 2019
21 °C

ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಲಹೆ

Published:
Updated:

ಗದಗ: ವಿಧಾನಸಭಾ ಚುನಾವಣೆಯಲ್ಲಿ  ನೋಂದಾಯಿತ ಮತದಾರರು ಆಸೆ-ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಜಿ.ತುರಮರಿ ಹೇಳಿದರು.ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಅಂಗನವಾಡಿ, ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪುಗಳ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಭಾಗವಹಿಸುವ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರೂ ಮತದಾನದ ಮಹತ್ವ ಅರಿತುಕೊಳ್ಳುವುದರ ಜೊತೆಗೆ ಇತರರಿಗೂ ಮಾರ್ಗದರ್ಶನ ನೀಡಿ, ಮತದಾನಕ್ಕೆ ಪ್ರೋತ್ಸಾಹಿಸಬೇಕೆಂದರು. ಪ್ರಾಥಮಿಕದಿಂದ ಪ್ರೌಢಶಾಲಾ ಹಂತದವರೆಗೆ ಓದುತ್ತಿರುವ ಜಿಲ್ಲೆಯ ಎಲ್ಲ ಶಾಲೆಗಳ 1,89,600 ಮಕ್ಕಳ ಮೂಲಕ ಪೋಷಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ವಿಶಿಷ್ಟ ರೀತಿಯ ಪತ್ರ ಅಭಿಯಾನ ಆರಂಭಿಸಲು ಉದ್ದೇಶಿಸಲಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಹಿ ಮಾಡಿರುವ ಈ ಪತ್ರವನ್ನು ಮಕ್ಕಳು ತಮ್ಮ ಪೋಷಕರಿಗೆ ತೋರಿಸಿ ಅವರಿಂದ ಸಹಿ ಪಡೆದು ಹಿಂದಿರುಗಿಸಲು ಸೂಚಿಸಲಾಗಿದೆ ಎಂದರು.

ಪ್ರತಿಕ್ರಿಯಿಸಿ (+)