ಗುರುವಾರ , ನವೆಂಬರ್ 21, 2019
20 °C

`ಮತದಾನ ಬಹಿಷ್ಕರಿಸದಿರಲು ಮನವೊಲಿಕೆ'

Published:
Updated:
`ಮತದಾನ ಬಹಿಷ್ಕರಿಸದಿರಲು ಮನವೊಲಿಕೆ'

ಮಡಿಕೇರಿ: ಜಿಲ್ಲೆಯ ಹಲವು ಭಾಗಗಳಲ್ಲಿ ಹಾಗೂ ಹಾಡಿಗಳಲ್ಲಿ  ಮತದಾನ ಬಹಿಷ್ಕಾರ ಮಾಡುವ ಕುರಿತು ವರದಿಯಾಗುತ್ತಿದ್ದು, ಮತದಾನ ಹಕ್ಕು ಮತ್ತು ಮಹತ್ವ ಕುರಿತು ಮತದಾರರಿಗೆ ತಿಳಿಸಿ ಮತದಾರರ ಮನವೊಲಿಸಲಾಗುವುದು ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷ ಕೆ.ಬಿ.ಅಂಜನಪ್ಪ ಅವರು ತಿಳಿಸಿದರು.ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಂಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಬುಧವಾರ ನಡೆದ ಜಾಥಾ ಕಾರ್ಯಕ್ರಮದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಶೇಕಡವಾರು ಮತದಾನ ಹೆಚ್ಚಳಕ್ಕೆ ಶ್ರಮಿಸಲಾಗುತ್ತದೆ. ಆ ನಿಟ್ಟಿನಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ನಾನಾ ಕಾರ್ಯಕ್ರಮಗಳನ್ನು ಮೇ 2ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.ಜಾಥಾವು ಗದ್ದಿಗೆಯಿಂದ ಹೊರಟು ಮಹದೇವ ಪೇಟೆ, ಪ್ರಮುಖ ಬೀದಿಗಳಲ್ಲಿ ಸಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಲಾಯಿತು.ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಜಿಲ್ಲಾ ಸಮಿತಿ ಸದಸ್ಯರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಸ್.ಶಿವಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ರವಿಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಣ್ಣೆಗೌಡ, ಪುಟ್ಟಪ್ಪ, ಛಲವಾದಿ ಮತ್ತಿತರರು ಇದ್ದರು.ಮತದಾನ ಜಾಗೃತಿ

ಸೋಮವಾರಪೇಟೆ: ಮೇ 5ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ  ಮತದಾರರು ಕಡ್ಡಾಯ ಮತದಾನದಲ್ಲಿ ಭಾಗವಹಿಸುವಂತೆ ಜನ ಜಾಗೃತಿ ಮೂಡಿಸಲು, ತಾಲ್ಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ಬುಧವಾರ ಜನಜಾಗೃತಿ ಜಾಥಾ ನಡೆಸಿದರು.ಇಲ್ಲಿಯ ಸರ್ಕಾರಿ ಆಸ್ಪತ್ರೆಯಿಂದ ಹೊರಟ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಾಥಾದಲ್ಲಿ ಆರೋಗ್ಯ ಇಲಾಖೆಯ ಮತ್ತು ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು. ನೇತೃತ್ವವನ್ನು ತಾಲ್ಲೂಕು ಆರೋಗ್ಯಧಿಕಾರಿ ಡಾ.ಚೇತನ್ ವಹಿಸಿದ್ದರು.

ಪ್ರತಿಕ್ರಿಯಿಸಿ (+)