ಮತದಾನ: ವಿದ್ಯಾರ್ಥಿಗಳ ಪ್ರತಿಜ್ಞಾವಿಧಿ

ಉಡುಪಿ: ‘ಮತದಾನದ ಹಕ್ಕನ್ನು ಕರ್ತವ್ಯ ಎಂದು ಪರಿಗಣಿಸಿ ಪ್ರಜೆಗಳು ಮತ ಚಲಾಯಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ ಹೇಳಿದರು.
ಸ್ವೀಪ್ ಸಮಿತಿ ಉಡುಪಿಯ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ತಮ್ಮ ಪೋಷಕರಿಗೆ ವಿವರಿಸಿ ಮತದಾನ ಮಾಡಲು ಪ್ರೇರೇಪಿಸಬೇಕು. ಏಪ್ರಿಲ್ ೧೭ ರಂದು ನಡೆಯುವ ಚುನಾವಣೆಯಲ್ಲಿ ಬೆಳಿಗ್ಗೆ ೭ ರಿಂದ ಸಂಜೆ ೬ ರ ವರೆಗೆ ಮತದಾನ ಮಾಡಲು ಅವಕಾಶವಿದ್ದು, ಜಿಲ್ಲಾಡಳಿತವು ಮತದಾನದ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುತ್ತಿದೆ. ನಾಗರಿಕರು ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ನಾಗೇಂದ್ರ ಮಧ್ಯಸ್ಥ, ಒಳಕಾಡು ಶಾಲೆಯ ಮುಖ್ಯೋಪಧ್ಯಾಯಿನಿ ಬಿ. ನಿರ್ಮಲಾ ಮತ್ತಿತರರು ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.