ಭಾನುವಾರ, ಜೂನ್ 13, 2021
21 °C
ನೋಂದಣಿ ಅಭಿಯಾನದಲ್ಲಿ 3 ಸಾವಿರ ಮಂದಿ ಅರ್ಜಿ

ಮತದಾರರಲ್ಲಿ ಜಾಗೃತಿ ಮೂಡಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ‘ಮತದಾರರಲ್ಲಿ ಜಾಗೃತಿ ಮೂಡಿಸಿ ಚುನಾವಣೆಯನ್ನು ಯಶಸ್ವಿಯಾಗಿಸುವಲ್ಲಿ ಸ್ವಯಂಸೇವಾ ಸಂಸ್ಥೆಗಳ ಪಾತ್ರವೂ ಹೆಚ್ಚಿದೆ’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್. ನರಸಿಂಹಮೂರ್ತಿ ಹೇಳಿದರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯಿತಿಯ ಸ್ಥಾಯಿಸಮಿತಿ ಸಭಾಂಗಣದಲ್ಲಿ ಮತದಾರರ ಜಾಗೃತಿ ಅಭಿಯಾನ ಸಮಿತಿಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ವಯಂಸೇವಾ ಸಂಸ್ಥೆಯ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. 

ಸ್ವಯಂಸೇವಾ ಸಂಸ್ಥೆಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಜಾಗೃತಿ ಹಾಗೂ ಪ್ರಚಾರದ ವ್ಯಾಪ್ತಿ ವ್ಯಾಪಕವಾಗಿದೆ. ಅವರ ಸೇವೆಯನ್ನು ಬಳಸಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ, ತಿದ್ದುಪಡಿ ಹಾಗೂ ಮತ ಚಲಾಯಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸಬಹುದು ಎಂದರು.ಮತದಾರರಲ್ಲಿ ಅರಿವು ಮೂಡಿಸಲು ಆಯಾ ಭಾಗದ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವಯಂಸೇವಾ ಸಂಸ್ಥೆಗಳು ಸೇವಾ ಮನೋಭಾವದಿಂದ ಆಂದೋಲನ ಮಾದರಿಯಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.ಮತದಾರರ ಪಟ್ಟಿಗೆ ಹೆಸರು ನೋಂದಣಿ, ತಿದ್ದುಪಡಿ ಹಾಗೂ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋಗಿದ್ದರೆ ಸೇರ್ಪಡೆ ಮಾಡುವ ಪ್ರಕ್ರಿಯೆಗೆ ಮಾರ್ಚ್‌ 16 ಅಂತಿಮ ದಿನ. 18ವರ್ಷ ಮೇಲ್ಪಟ್ಟ ಅರ್ಹರು ಆಯಾ ಮತಗಟ್ಟೆಯಲ್ಲಿನ ಬೂತ್‌ಮಟ್ಟದ ಅಧಿಕಾರಿಗಳಿಂದ ನಮೂನೆ- 6 ಅನ್ನು ಭರ್ತಿ ಮಾಡಿ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ  ಅಂತಹವರು ಪುನಃ ಸೂಕ್ತ ದಾಖಲೆಯೊಂದಿಗೆ ನಮೂನೆ- 6 ಅನ್ನು ಭರ್ತಿ ಮಾಡಿ ಹೆಸರು ಸೇರ್ಪಡೆಗೊಳಿಸಬಹುದು ಎಂದರು.

ಈಚೆಗೆ ನಡೆದ ಮತದಾರರ ನೋಂದಣಿ ಅಭಿಯಾನದಲ್ಲಿ ಜಿಲ್ಲೆಯಲ್ಲಿ 3 ಸಾವಿರಕ್ಕೂ ಹೆಚ್ಚು ಜನರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದಾರೆ ಎಂದರು.ನಗರ ಪ್ರದೇಶದಲ್ಲಿ ಮತದಾನದ ಹಿನ್ನಡೆ ಸರಿಪಡಿಸಲು ರಾಜ್ಯಶಾಸ್ತ್ರ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಬಳಸಿಕೊಂಡು ಮನೆ ಮನೆಗೆ ಭೇಟಿ ನೀಡುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗು ವುದು. ಬುಡಕಟ್ಟು ಜನಾಂಗದವರು ಮತದಾನದ ಪ್ರಕ್ರಿಯೆಯಿಂದ ವಂಚಿತರಾಗದಂತೆ ಯೋಜನೆಗಳನ್ನು ರೂಪಿಸಲಾಗಿದೆ. ಅವರಲ್ಲಿ ಮತದಾನ ಮಹತ್ವ ಮತ್ತು ಹಕ್ಕುಗಳ ಕುರಿತು ವಿಶೇಷ ಕಾರ್ಯಕ್ರಮ ಆಯೋಜಿಸಲಾ ಗುವುದು. ಈ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಯೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.        

 

ಮೊಬಿಲಿಟಿ ಇಂಡಿಯಾ ಸಂಸ್ಥೆಯ ಆನಂದ್ ಮಾತನಾಡಿ, ಹೋಬಳಿ ಮತ್ತು ಬೂತ್ ಮಟ್ಟದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳ ಬೇಕು. ನೀತಿಸಂಹಿತೆ ಉಲ್ಲಂಘನೆಯ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಬೇಕು. ಅಂಗವಿಕಲರಿಗೆ ಅನುಕೂಲವಾಗುವಂತೆ ಮತಗಟ್ಟೆಗಳಲ್ಲಿ ರ್‌್ಯಾಂಪ್‌ ವ್ಯವಸ್ಥೆ ಮಾಡಬೇಕು ಎಂದರು.  ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಸಿ.ಎಚ್. ವಸುಂಧರಾದೇವಿ, ಸಹಾಯಕ ಯೋಜನಾಧಿಕಾರಿ ಸಿದ್ದಲಿಂಗಸ್ವಾಮಿ, ಮತದಾರರ ಜಾಗೃತಿ ಸಮಿತಿಯ ಅಧಿಕಾರಿ ಸದಾನಂದ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.