ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ

7

ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ

Published:
Updated:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಆಯ್ದ 21 ಬೆಂಗಳೂರು ಒನ್ ಕೇಂದ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ಒದಗಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಇಲ್ಲವೆ ಪಟ್ಟಿಯಿಂದ ಹೆಸರು ಕೈಬಿಡಲು ಕೋರಿ ನಮೂನೆ-6, 7, 8 ,8ಎ ಅರ್ಜಿಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸ್ವೀಕರಿಸಲಾಗುತ್ತದೆ.



ಈ ಸೇವೆಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ರಾಜಾಜಿನಗರ ವಿಧಾನಸಭಾ ಕ್ಷೇತ್ರದ 2ನೇ ಬ್ಲಾಕ್, ಬೆಂಗಳೂರು ಒನ್ ಕೇಂದ್ರದಲ್ಲಿ ಭಾನುವಾರ ಚಾಲನೆ ನೀಡಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry